ಮೊರಾರ್ಜಿ ದೇಸಾಯಿ ವಸತಿ ಶಾಲಾ ಆಯ್ಕೆಗಾಗಿ ಕರೆದಿರುವ ಕೌನ್ಸಿಲಿಂಗ್ ದಿನಾಂಕ ಮೂಂದೂಡಿಕೆ
ದಾವಣಗೆರೆ ಜೂ 5- ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿದ್ದು, ಈ ಪರೀಕ್ಷೆಯಲ್ಲಿ ಆಯ್ಕೆಯಾದ ತಾತ್ಕಾಲಿಕ ವಿದ್ಯಾರ್ಥಿಗಳ ಪಟ್ಟಿಯನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಂ. 44, `ಎ’ ಬ್ಲಾಕ್, 2ನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ ಇಲ್ಲಿ ಪ್ರಕಟಿಸಲಾಗಿರುತ್ತದೆ.
ಈ ಪಟ್ಟಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲಾ ಆಯ್ಕೆಗಾಗಿ ಕರೆದಿರುವ ಕೌನ್ಸಿಲಿಂಗ್ ದಿನಾಂಕಗಳನ್ನು ನಿರ್ದೇಶನಾಲಯದ ಮುಂದಿನ ಪರಿಷ್ಕøತ ಪಟ್ಟಿಯು (ಆಯ್ಕೆ ಪಟ್ಟಿ) ಬರುವವರೆಗೂ ಮುಂದೂಡಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-250022 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *