ದಾವಣಗೆರೆ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ವತಿಯಿಂದ 2024-25ನೇ ಸಾಲಿಗೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುನ್ನು ದಾವಣಗೆರೆ ನಗರದ ಹೊಸಕುಂದುವಾಡದಲ್ಲಿ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಪ್ರಾರಂಭಿಸಲಿದ್ದು, ಈ ಕಾಲೇಜಿನಲ್ಲಿ ಉರ್ದು ಮಾಧ್ಯಮ ಭೋದಿಸಲು ಎಂ.ಎ, ಬಿ.ಎಡ್ ವಿದ್ಯಾರ್ಹತೆ ಹೊಂದಿರುವ 1 ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಜೂನ್ 15 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಚೇರಿ ವೇಳೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.