ದಾವಣಗೆರೆ, ಜೂ.11 : ಶಾಲಾ ಶಿಕ್ಷಣ ಮತ್ತು ಸಮಗ್ರ ಶಿಕ್ಷಣ ಯೋಜನೆಯಡಿ ಪ್ರಸಕ್ತ ಸಾಲಿಗೆ ಫಿಜಿಯೋಥೆರಪಿಸ್ಟ್ ಸೇವೆಯನ್ನು ಕೆಲಸ ಮತ್ತು ಪಾವತಿ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ವಿಶೇಷ ಅಗತ್ಯವುಳ್ಳ ಮಕ್ಕಳ ಸಮನ್ವಯ ಶಿಕ್ಷಣ ಮಧ್ಯವರ್ತನ ಕಾರ್ಯಚಟುವಟಿಕೆಗಳ ಕಾರ್ಯ ಅನುμÁ್ಠನಕ್ಕಾಗಿ ತೀವ್ರ ನ್ಯೂನತೆ ಹೊಂದಿರುವ ವಿಶೇಷ ಚೇತನ ಮಕ್ಕಳಲ್ಲಿ ಗುರುತಿಸಲ್ಪಟ್ಟಿರುವ “ದೈಹಿಕ ನ್ಯೂನತೆ” ಮತ್ತು “ಬಹುನ್ಯೂನತೆ” ಹೊಂದಿರುವ ಮಕ್ಕಳಿಗೆ ಫಿಜಿಯೋಥೆರಪಿ ಮೂಲಕ ನ್ಯೂನತೆಯ ಪ್ರಮಾಣವನ್ನು ತಗ್ಗಿಸುವ ದೃಷ್ಟಿಯಿಂದ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಅಗತ್ಯತೆ ಇರುವ ಮಕ್ಕಳಿಗೆ ಫಿಜಿಯೋಥೆರಪಿ ಸೇವೆ ಒದಗಿಸಲು ಡಿ.ಪಿ.ಟಿ ಅಥವಾ ಬಿ.ಪಿ.ಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಜೂನ್ 20 ರೊಳಗೆ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕೆ.ಇ.ಬಿ ಸರ್ಕಲ್, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರಾತಾ ಇಲಾಖೆಯ ಉಪನಿರ್ದೇಶಕರಾದ ಜಿ.ಕೊಟ್ರೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *