ನ್ಯಾಮತಿ; ಕೇವಲ ರಾಜಧಾನಿ ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೇ ಅಡಿಪಾಯ ಹಾಕಿದವರು ಕೆಂಪೇಗೌಡರು. ದೂರದೃಷ್ಟಿಯಿಂದ ನಾಡನ್ನು ಕಟ್ಟುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಡಿ ಜಿ ಶಾಂತನಗೌಡ್ರು ನಾಡಪ್ರಭು ಕೆಂಪೇಗೌಡರನ್ನು ಸ್ಮರಿಸಿದರು.
ತಾಲೂಕ್ ಆಡಳಿತ ಹಾಗೂ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರಂದು ಏರ್ಪಡಿಸಲಾಗಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರದ ಸಂಸ್ಥಾಪಕರು. ಅತ್ಯಂತ ಮುಂದಾಲೋಚನೆಯಿಂದ ನಗರವನ್ನು ನಿರ್ಮಿಸಿದರು. 16 ನೇ ಶತಮಾನದಲ್ಲೇ ಬೆಂಗಳೂರಿನಲ್ಲಿ ಅನೇಕ ಕೆರೆಗಳು, ಮಾರುಕಟ್ಟೆಗಳನ್ನು ನಿರ್ಮಿಸಿದ್ದರು. ಅನೇಕ ಸಾಮಾಜಿಕ ಪಿಡುಗಗಳ ವಿರುದ್ದ ಕೆಲಸ ಮಾಡಿದ್ದರು. ಬೆಂಗಳೂರು ನಗರ ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ರಾಜ್ಯದ ಬೆನ್ನೆಲುಬಾಗಿದೆ. ಕೆಂಪೇಗೌಡರು ನಾಡು ಕಟ್ಟುವಲ್ಲಿ ನಮಗೆಲ್ಲ ಸ್ಪೂರ್ತಿದಾಯಕರಾಗಿದ್ದಾರೆ ಎಂದು ಹೇಳಿದರು.
ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪಟ್ಟಣದ ಕಲ್ಮಠದಿಂದ ತಾಲುಕ ಕಛೇರಿಯವರಿಗೆ ಶಾಲಾ ವಿದ್ಯಾರ್ಥಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಜೈಕಾರ ಕೂಗುತ್ತಾ ಕಾಲ ಜಾತಾದ ಮೂಲಕ ಮೆರವಣಿಗೆ ಮಾಡಿದರು.
ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪ, ಶಿಕ್ಷಣ ಇಲಾಖೆಯ ಮುದ್ದನಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾಧ್ಯಕ್ಷ ಡಿ ರಾಮಪ್ಪ,ಸಿ ಆರ್ ಪಿ ಚಂದ್ರನಾಯ್ಕ, ಮಲ್ಲೇಶಪ್ಪ, ಕೃಷಿ ಅಧಿಕಾರಿ ಪ್ರತಿಮಾ, ತೋಟಗಾರಿಕೆ ಇಲಾಖೆ ಅಧಿಕಾರಿ ರೇಖಾ ತಾಲೂಕು ಮಟ್ಟದ ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಸಹ ಇದ್ದರು.