ದಾವಣಗೆರೆ; ಜೂನ್ 27 : 2024-25ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪಿ.ಯು.ಸಿ. ಮತ್ತು ಪಿ.ಯು. ಸಮಾನಾಂತರ ಕೋರ್ಸ್‍ನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು https://shp.karnataka.gov.in/bcwd ಅನ್ನು ಸಂಪರ್ಕಿಸಿ ONLINE ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇಲ್ಲಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ 8050770004, 8050770005 ಸಹಾಯವಾಣಿಗೆ ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.