ದಾವಣಗೆರೆ; ಜೂನ್ 27 :  2024-25ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ  ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
  ವಿದ್ಯಾರ್ಥಿಗಳು  https://shp.karnataka.gov.in/bcwd    ಅನ್ನು ಸಂಪರ್ಕಿಸಿ  ONLINE     ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್  https://bcwd.karnataka.gov.in  ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ  bcwdhelpline@gmail.com    ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇಲ್ಲಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ 8050770004, 8050770005 ಸಂಖ್ಯೆಗೆ ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *