ದಾವಣಗೆರೆ ಜು.16):  ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ, ಪಡೆಯದ ರೈತರು ನೋಂದಾಯಿಸಿಕೊಳ್ಳÀಲು ತಿಳಿಸಲಾಗಿದೆ.
  ಬೆಳೆಸಾಲ ಪಡೆದ ರೈತರು ಬೆಳೆಸಾಲ ಮಂಜೂರು ಮಾಡುವಾಗ, ಕಡ್ಡಾಯವಾಗಿ ಬೆಳೆ ವಿಮೆಗೆ ಒಳಪಡಿಸಲಾಗುವುದು, ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಪಾಸ್ ಪುಸ್ತಕ, ಕಂದಾಯ ರಶೀದಿ ಹಾಗೂ ಆಧಾರ್ ಸಂಖ್ಯೆಯನ್ನು ನೀಡಿ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮಾ ಕಂತು ಪಾವತಿಸಿ ನೋಂದಾಯಿಕೊಳ್ಳಬಹುದಾಗಿದೆ.
    ಮುಸುಕಿನ ಜೋಳ (ನೀರಾವರಿ) (ಮಳೆ ಆಶ್ರಿತ), ಭತ್ತ (ನೀರಾವರಿ), ಜೋಳ (ಮಳೆ ಆಶ್ರಿತ), ಜೋಳ (ನೀರಾವರಿ), ರಾಗಿ (ಮಳೆ ಆಶ್ರಿತ), ರಾಗಿ (ನೀರಾವರಿ), (ಮಳೆ ಆಶ್ರಿತ), ನವಣೆ (ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ), ಶೇಂಗಾ (ಮಳೆ ಆಶ್ರಿತ), ಶೇಂಗಾ (ನೀರಾವರಿ), ಸಜ್ಜೆ (ಮಳೆ ಆಶ್ರಿತ), ಹುರುಳಿ (ಮಳೆ ಆಶ್ರಿತ) ರೈತರು ಜುಲೈ  31 ರೊಳಗಾಗಿ ವಿಮಾ ನೊಂದಣಿ ಮಾಡಿಸಲು ಕೊನೆ ದಿನವಾಗಿರುತ್ತದೆ. ಸೂರ್ಯಕಾಂತಿ (ಮಳೆ ಆಶ್ರಿತ), ಸೂರ್ಯಕಾಂತಿ (ನೀರಾವರಿ) ಈ ಬೆಳೆಗಳಿಗೆ ಆಗಸ್ಟ್ 16 ರವರೆಗೆ ಅವಕಾಶವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.  

Leave a Reply

Your email address will not be published. Required fields are marked *