ದಾವಣಗೆರೆ; ಜು.19 : ದಾವಣಗೆರೆ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 45 ವಾರ್ಡ್ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ.
6 ರಿಂದ 18 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುತ್ತಿರುವುದು ಮೂಲಭೂತ ಹಕ್ಕು ಆಗಿರುತ್ತದೆ. ಹಾಗೂ ಮಕ್ಕಳ ಉಚಿತ ಶಿಕ್ಷಣ ಹಕ್ಕು ಮಕ್ಕಳ ದಾಖಲಾತಿ ಹಾಗೂ ಹಾಜರಾತಿಗೆ ಸಂಬಂಧಿಸಿದಂತೆ ಈ ಸಂಬಂಧ ಪಾಲಿಕೆಯ 45 ವಾರ್ಡ್ಗಳ ವ್ಯಾಪ್ತಿಯಲ್ಲಿ ಜುಲೈ 22 ರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಮನೆ ಮನೆಗೆ ತೆರಳಿ ಸರ್ವೆ ಕಾರ್ಯವನ್ನು ಮೊಬೈಲ್ ಆಪ್ ಮೂಲಕ ಸ್ವ-ಸಹಾಯ ಸಂಘದ ಸದಸ್ಯರುಗಳು ಕೈಗೊಳ್ಳುತ್ತಾರೆ. ಮೊಬೈಲ್ ಆಪ್ ಗೆ ಸಂಬಂಧಿಸಿದಂತೆ ಕೇಳುವ ಪೂರ್ಣ ಮಾಹಿತಿಯನ್ನು ಕೊಡುವುದರೊಂದಿಗೆ ಸರ್ವೆ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.