ದಾವಣಗೆರೆ, ಜು.26: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್, ಕೆನರಾ ಬ್ಯಾಂಕ್ ಮತ್ತು ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 01 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
   ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
   ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
    ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *