ನ್ಯಾಮತಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಡೆಂಗ್ಯೂ ಅರಿವು ಕಾರ್ಯಕ್ರಮ ಜಾಗೃತಿ ಮೂಡಿಸಲಾಯಿತು. ಕಾಲೇಜಿನ ಪ್ರಾಚಾರ್ಯ ವಿ.ಪಿ ಪೂರ್ಣಾನಂದ ಡೆಂಗ್ಯೂ ಜ್ವರ ನಿರ್ಮೂಲನೆಯ ಬಗ್ಗೆ ವಿದ್ಯಾರ್ಥಿಗಳನ್ನು ಕುರಿತು ‌ ಮಾತನಾಡಿ ತಮ್ಮ ಮನೆ ಹಾಗೂ ತಮ್ಮ ಸುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಡೆಂಗಿ ರೋಗದಿಂದ ಮುಕ್ತರಾಗಬಹುದು ಎಂದು ಹೇಳಿದರು.ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಸೂಪರ್ವೈಸರ್ ನಿಂಗಪ್ಪ ಡೆಂಗ್ಯೂ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಡೆಂಗ್ಯೂ ಹೇಗೆ ಹರಡುತ್ತದೆ , ಅದು ಬರದಂತೆ ಮುನ್ನೆಚ್ಚರಿಕೆ ವಹಿಸುವ ಎನ್ನುವ ವಿಷಯದ ಕುರಿತು ಮಾರ್ಗದರ್ಶನವನ್ನು ನೀಡಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕಾದಿಕಾರಿ ಗಂಗಾಧರ ನವಲೆ ಆರೋಗ್ಯ ಇಲಾಖೆಯ ನವೀನ್ , ಉಪನ್ಯಾಸಕ ಕೋಮಲಮ್ಮ, ಶಿವಕುಮಾರ್,ನಾಗರಾಜ್ , ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *