ದಾವಣಗೆರೆ ಆ.05: ಹೊನ್ನಾಳಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 21 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
  ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್  http:88dwcd.karnataka.gov.in     ಮತ್ತು  http://karnemakaone.kar.nic.in/abcd/    ಸಲ್ಲಿಸಬಹುದು ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *