ದಾವಣಗೆರೆ; ಆ 17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಡಿ..ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನ, ಇಲ್ಲಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ನಾಯಕ, ಸಾಮಾಜಿಕ ಹರಿಕಾರ ಡಿ. ದೇವರಾಜ ಅರಸುರವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಚಿದಾನಂದ. ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್,ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಭಾಗವಹಿಸುವರು.