ನ್ಯಾಮತಿ: ಶೋಷಿತರು, ಹಿಂದುಳಿದವರು, ತಳ ಸಮುದಾಯ, ರೈತಾಪಿ ವರ್ಗದವರ ಕೈಹಿಡಿದು ಅವರ ಪರವಾಗಿ ಕಾನೂನುಗಳನ್ನು ತರುವ ಮೂಲಕ ಅವರ ಏಳ್ಗೆಗೆ ಶ್ರಮಿಸಿದವರು ಡಿ.ದೇವರಾಜ ಅರಸುರವರು ಎಂದು ಶಾಸಕ ಡಿಜಿ ಶಾಂತನಗೌಡ ಹೇಳಿದರು.
ತಾಲೂಕ ಆಡಳಿತ ತಾಲೂಕು ಪಂಚಾಯಿತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪಟ್ಟಣ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಾಧನೆಗಳ ಸರದಾರ, ಸಾಮಾಜಿಕ ಪರಿವರ್ತನೆಯ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರಾಂತಿಕಾರಿ ಬದಲಾವಣೆಯಿಂದ ಹಸಿದ ಹೊಟ್ಟೆಗೆ ಅನ್ನ ನೀಡಿದವರು. ಭೂ ಸುಧಾರಣೆ ಕಾಯ್ದೆ ಜಾರಿಗೆ ತರುವ ಮೂಲಕ ಜಮೀನ್ದಾರಿ ಪದ್ದತಿಯನ್ನು ನಿರ್ಮೂಲನೆ ಮಾಡಿ ಉಳುವವನೇ ಒಡೆಯನನ್ನಾಗಿ ಮಾಡಿದರು. ಸಾಮಾಜಿಕ ಪಿಡುಗಾಗಿದ್ದ ಮಲ ಹೊರುವ ಪದ್ಧತಿ ನಿರ್ಮೂಲನೆ ಮಾಡಿದರು. ಜೀತದಾಳು ಪದ್ದತಿಗೆ ಮುಕ್ತಿ ನೀಡಿದರು. ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಹಿಂದುಳಿದವರ ಬೆಳಕಾದರು. ಹಾವನೂರು ವರದಿ ಜಾರಿಗೆ ತರುವ ಮೂಲಕ ಹಿಂದುಳಿದ ವರ್ಗಗಳ ಏಳ್ಗೆಗೆ ಕಾರಣರಾದರು. ತಹಸಿಲ್ದಾರ್ ಗೋವಿಂದಪ್ಪ ಎಚ್ ಬಿ, ಸಮಾಜ ಕಲ್ಯಾಣ ಅಧಿಕಾರಿ ಮೃತ್ಯುಂಜಯ ಹಾಗೂ ಹಾಸ್ಟೆಲ್ ವಾರ್ಡನ್ ಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *