ದಾವಣಗೆರೆ,ಆಗಸ್ಟ್.22 ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಪಡೆದ ಕ್ರೀಡಾಪಟುಗಳಿಗೆ ಪ್ರಸಕ್ತ ಸಾಲಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 18 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ಸಹಾಯಕ ನಿರ್ದೇಶಕಿ ಜಯಲಕ್ಷ್ಮಿಬಾಯಿ ತಿಳಿಸಿದ್ದಾರೆ.