ದಾವಣಗೆರೆ, ಆ.22 ; ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಾತೃಶ್ರೀ ನಗರ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ, ಜಿ.ಚನ್ನಪ್ಪ ಪದವಿ ಪೂರ್ವ ಕಾಲೇಜು, ಆನಗೋಡು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 23 ರಂದು ಬೆಳಗ್ಗೆ 10.30 ಕ್ಕೆ ಆನಗೋಡು ಜಿ.ಚನ್ನಪ್ಪ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಲಿಕಾಸಕ್ತಿ ಮತ್ತು ದುಶ್ಚಟಗಳಿಂದ ದೂರ ಉಳಿಯುವುದು ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
 ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಕಾವೇರಿ ಗೌಡ ಅಧ್ಯಕ್ಷತೆ ವಹಿಸುವರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ.ಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಇತಿಹಾಸ ಉಪನ್ಯಾಸಕರಾದ ಹೆಚ್.ಪಿ.ಯಶವಂತ್ ಕುಮಾರ್, ಮಾತೃಶ್ರೀ ಸಂಸ್ಥೆ ಅಧ್ಯಕ್ಷರಾದ ಕಿರಣ್ ಎ.ಎಲ್ ಉಪನ್ಯಾಸ ನೀಡುವರು.

Leave a Reply

Your email address will not be published. Required fields are marked *