ರಾಜ್ಯ ಸರ್ಕಾರದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬರುವ ಅಕ್ಟೋಬರ್ 17 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಜಯಂತಿ ಸಂಧರ್ಭದಲ್ಲಿ ಪರಿಶಿಷ್ಟ ಪಂಗಡ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಹಾಗೂ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ರವರ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಕೊಠಡಿ ಸಂಖ್ಯೆ 45. ಎರಡನೇ ಮಹಡಿ. ಜಿಲ್ಲಾಡಳಿತ ಭವನ, ದಾವಣಗೆರೆ. ಇಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಕಛೇರಿ ಸಮಯದಲ್ಲಿ ಸೆ. 17 ರ ಒಳಗಾಗಿ ಸಲ್ಲಿಸತಕ್ಕದ್ದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸಂರ್ಪಕಿಸಲು ಕಲ್ಯಾಣಾಧಿಕಾರಿ ನವೀನ್ ಸಿ.ಮಠದ್ ತಿಳಿಸಿದ್ದಾರೆ.