ಕುವೆಂಪು ವಿ.ವಿ ಯ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗ ಹಾಗೂ ಪರಿಸರ ಪ್ರವಾಸೋದ್ಯಮ ಮಂಡಳಿ ಬೆಂಗಳೂರು, ಭದ್ರಾ ಹುಲಿ ಸಂರಕ್ಷಿತ ಯೋಜನೆ ಚಿಕ್ಕಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 03ರಿಂದ 6ರವರೆಗೆ ನಾಲ್ಕು ದಿನ ಪ್ರಮಾಣಿಕೃತ ನಿಸರ್ಗ ತಜ್ಞರ ತರಬೇತಿ ಕಾರ್ಯಗಾರವನ್ನು ನಡೆಸಲಾಯಿತು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶ್ರೀ ಪ್ರಕಾಶ್ ಏ.ಡಿ ವ್ಯವಸ್ಥಾಪಕ ನಿರ್ದೇಶಕರು, ಪರಿಸರ ಪ್ರವಾಸೋದ್ಯಮ ಮಂಡಳಿ, ಬೆಂಗಳೂರು ಇವರು ಮಾತನಾಡಿ ಪ್ರತಿಯೊಂದು ಜೀವಿಯ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಈ ಕಾರ್ಯಗಾರ ಬಹು ಉಪಯೋಗವಾಗಿದೆ. ಎಲ್ಲ ಜೀವಿಗಳಿಗೂ ಸಹ ಬದುಕುವ ಹಕ್ಕಿದೆ ಎಂಬುದನ್ನು ಅರಿಯಬೇಕಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಭಾಗದ ಮುಖ್ಯಸ್ಥರಾದ ಡಾ.ವಿಜಯಕುಮಾರ್ ಮಾತನಾಡಿ ನಮ್ಮ ರಾಜ್ಯದಲ್ಲಿ ವಿ.ವಿ ಮಟ್ಟದಲ್ಲಿ ನಡೆಯುತ್ತಿರುವುದು ಇದು ಮೊದಲನೆಯ ಕಾರ್ಯಕ್ರಮವಾಗಿದೆ ಇದು ನಮಗೆ ತುಂಬಾ ಹೆಮ್ಮೆ ತಂದಿದೆ. ಇಂತಹ ಕಾರ್ಯಕ್ರಮಗಳು ಎಲ್ಲೆಡೆ ಆದಲ್ಲಿ ಸಾರ್ವಜನಿಕರಿಗೆ ಜೀವವೈವಿಧ್ಯತೆಯ ಪ್ರಾಮುಖ್ಯತೆ ಏನೆಂಬುದು ತಿಳಿದು ಜೀವವೈವಿಧ್ಯತೆ ಉಳಿಸಲು ಸಾಧ್ಯವಾಗುತ್ತದೆ ಎಂದರು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ರಾಹುಲ್ ಆರಾಧ್ಯ, ಶ್ರೀ ಕಿರಣ್ ಬಾಗಡೆ ಶ್ರೀನಿವಾಸ್, ಡಾ. ಸಂತೋಷ್ ಕುಮಾರ್ ಮತ್ತು ಕಾರ್ತಿಕ್ ಎನ್. ಜೆ ಭಾಗವಹಿಸಿ ಕಾರ್ಯಗಾರವನ್ನು ಯಶಸ್ವಿಗೊಳಿಸಿಕೊಟ್ಟರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸಂತೋಷ್ ಸಾಗರ್, ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ನಾಗರಾಜ್ ಪರಿಸರ, ವಲಯ ಅರಣ್ಯ ಅಧಿಕಾರಿ ಸಂತೋಷ್, ಕುಮಾರ್ ನಾಯಕ್, ಡಾ. ಪ್ರಮೋದ್, ಇನ್ನಿತರರು ಉಪಸ್ಥಿತರಿದ್ದರು. ಸಮಾರಂಭದ ಕೊನೆಯಲ್ಲಿ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕುಮಾರಿ ಸಿಂಚನ ನಿರೂಪಿಸಿ, ಜಯಂತ್ ಬಾಬು ಎಲ್ಲರನ್ನು ವಂದಿಸಿದರು.