ಡಾ.ಬಿ.ಆರ್. ಅಂಬೇಡ್ಕರ್ ನಿಗಮಗಳ ವ್ಯಾಪ್ತಿಗೆ ಬರುವ ಜನಾಂಗದ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಯೋಜನೆ, ಐ.ಎಸ್.ಬಿ.ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಎಂ.ಸಿ.ಎಫ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಮತ್ತು ಭೂ ಒಡೆತನ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಅಕ್ಟೋಬರ್ 10 ರೊಳಗಾಗಿ ಕರ್ನಾಟಕ ಒನ್, ಗ್ರಾಮ-1, ಸೇವಾಸಿಂಧುವಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮ, #337/16ಎ-16, ಗಣೇಶ ಲೇಔಟ್, 1ನೇ ಕ್ರಾಸ್ ಪಿ.ಬಿ.ರಸ್ತೆ ದಾವಣಗೆರೆ ಇಲ್ಲಿ ಸಂಪರ್ಕಿಸಲು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.