ದಾವಣಗೆರೆ .ಸೆ 11…
ಇಂದು ನಗರದ ಕುವೆಂಪು ಕನ್ನಡ ಭವನದಲ್ಲಿ ಶಿಕ್ಷಕರ ದಿನಾಚರಣೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದಾಗ , ,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲಾ ಅಧ್ಯಕ್ಷರಾದ ಬಿ ವಾಮದೇವಪ್ಪ ಮತ್ತು ವೇದಿಕೆ ಮೇಲೆ ಉಪಸ್ಥಿತರಿದ್ದ ಎಲ್ಲರೂ ಸೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಡಾ. ಸುರೇಶ್ ಬಿ ಹಿಟ್ನಾಳ್ ಅವರಿಗೆ ,ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲಾ ಮತದಾನ ಜಾಗೃತಿ ಸಮಿತಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ರಾಜ್ಯದಲ್ಲಿಯೇ ಹೆಚ್ಚು ಮತದಾನದಲ್ಲಿ ದಾವಣಗೆರೆ ಜಿಲ್ಲೆ ಎರಡನೇ ಸ್ಥಾನ ಪಡೆಯುವಂತೆ ಮಾಡಿದ ಅವರಿಗೆ ಜಿಲ್ಲೆಯ ಸಮಸ್ತ ನಾಗರೀಕರ ಪರವಾಗಿ ಹೃದಯಸ್ಪರ್ಶಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.