ದಾವಣಗೆರೆ, ಸೆ.12 ದೇಶದಲ್ಲಿ ಹೆಣ್ಣು ಮಕ್ಕಳಿಗೆÀ ರಕ್ಷಣೆ ಜೊತೆಗೆ ಹೆಚ್ಚಿನ ಸುರಕ್ಷತೆ ಕಲ್ಪಿಸುವ ಮೂಲಕ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕಾಗಿದೆ ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಗುರುವಾರ ನಗರದ ಪೆÇಲೀಸ್ ಕವಾಯತ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೆÇಲೀಸ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ನಾರಿ ಶಕ್ತಿ ಕಾರ್ಯಕ್ರಮ’ ಉದ್ಘಾಟಿಸಿ ಹಾಗೂ ಸುರಕ್ಷಾ ಆ್ಯಪ್ಗೆ ಚಾಲನೆ ನೀಡಿ ಬಳಿಕ ಮಾತಾನಾಡಿದರು. ಹೆಣ್ಣು ಮಕ್ಕಳಿಗಾಗಿ ಹೆಲ್ಪ್ ಲೈನ್, ಕಾನೂನಿನಲ್ಲಿರುವ ಸುರಕ್ಷತೆಯ ಜೊತೆಗೆ ಆತ್ಮ ರಕ್ಷಣೆಗೆ ಶಾಲಾ, ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚಿನ ಸುರಕ್ಷತೆಯ ವಾತಾವರಣವನ್ನು ನಿರ್ಮಾಣ ಮಾಡಬೇಕಿದೆ ಎಂದರು.
ಇತ್ತೀಚಿನÀ ದಿನಗಳಲ್ಲಿ ಹುಬ್ಬಳ್ಳಿ, ಪಶ್ಚಿಮ ಬಂಗಾಳದಲ್ಲಿ ನಡೆದ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ನೋಡಿದರೆ ನಾರಿ ಶಕ್ತಿಯಂತಹ ಆತ್ಮರಕ್ಷಣೆ ನೀಡುವ ಕಾರ್ಯಕ್ರಮಗಳು ತುಂಬಾ ಅವಶ್ಯಕತೆ ಇದೆ. ಸರ್ಕಾರಿ ವಸತಿ ನಿಲಯದಲ್ಲಿ ಇರುವ ಹೆಣ್ಣು ಮಕ್ಕಳಿಗಾಗಿ ಸುರಕ್ಷತೆಯ ಜೊತೆಗೆ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಲಾಗುತ್ತದೆ. ಹಾಸ್ಟೆಲ್ಗಳಲ್ಲಿ ವಿದ್ಯಾಭ್ಯಾಸ ಮಾಡುವ ಹೆಣ್ಣು ಮಕ್ಕಳು ತಂದೆ, ತಾಯಿಗೆ ಕರೆ ಮಾಡಿ ತಮ್ಮ ದೈನಂದಿನ ಚಟುವಟಿಕೆಗಳ ಬಗ್ಗೆ ನಿಜವಾದ ಮಾಹಿತಿಯನ್ನು ನೀಡುತ್ತಿರಬೇಕು. ಬೇರುಗಳು ಗಟ್ಟಿಯಾಗಿದ್ದರೆ ಯಾವುದೇ ಬಿರುಗಾಳಿಗೆ ಅಲುಗಾಡುವುದಿಲ್ಲ, ಹಾಗೆಯೇ ಹೆಣ್ಣು ಮಕ್ಕಳು ಮನೆಯಲ್ಲಿ, ಶಾಲೆಯಲ್ಲಿ ಕಲಿತುಕೊಂಡ ಒಳ್ಳೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಜೀವನದಲ್ಲಿ ಒಳ್ಳೆಯ ಸಾಧನೆ ಮಾಡಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಅವರು ಪ್ರತಿಜ್ಞಾ ವಿಧಿ ಭೋಧಿಸಿ ಮಾತಾನಾಡಿ ಕರಾಟೆ ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವುದರ ಜೊತೆಗೆ ವೈಯಕ್ತಿಕ ಸಾರ್ವಜನಿಕ ಬದುಕಿನಲ್ಲಿ ಸಮಸ್ಯೆಗಳು ಬಂದಾಗ ಎದುರಿಸಲು ಸಹಕಾರಿಯಾಗುತ್ತದೆ. ದಾವಣಗೆರೆಯಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಸುರಕ್ಷಾ ಆ್ಯಪ್ ಜೊತೆಗೆ ದುರ್ಗಾ ಪಡೆಯನ್ನು ಇನಷ್ಟು ಕಾರ್ಯ ಪ್ರವೃತ್ತಗೊಳಿಸಲಾಗಿದೆ. ಹೆಣ್ಣುಮಕ್ಕಳಿಗೆ ತೊಂದರೆಯಾದ ಸಂದರ್ಭದಲ್ಲಿ ಸಹಾಯವಾಣಿಗೆ ಕರೆ ಮಾಡಿದರೆ ತಕ್ಷಣ ಕ್ರಮಕೈಗೊಳ್ಳಲಾಗುವ್ಯದು, ಹೆಣ್ಣು ಮಕ್ಕಳು ದೈಹಿಕವಾಗಿ ಸದೃಢವಾಗಿದ್ದರೆ ಜೀವದಲ್ಲಿನ ಸವಾಲುಗಳನ್ನು ಎದುರಿಸಬಹುದು. ಆದ್ದರಿಂದ ಹೆಣ್ಣು ಮಕ್ಕಳು ಕರಾಟೆಯನ್ನು ಕೇವಲ ಅಭ್ಯಾಸವಾಗಿ ಬಳಸಿಕೊಳ್ಳದೇ ಹವ್ಯಾಸವಾಗಿ ಬಳಸಿಕೊಳ್ಳಬೇಕು ಎಂದರು.
ಮಕ್ಕಳ ಮೇಲೆ ಆಗುವ ದೌರ್ಜನ್ಯಗಳನ್ನು ತಡೆಗಟ್ಟಲು ಪೆÇೀಕ್ಸೋ ಕಾಯ್ದೆ ಇದ್ದು, ಶಾಲೆ, ಸಾರ್ವಜನಿಕ ಸ್ಥಳಗಳಲ್ಲಿ ದೈಹಿಕ ಅಥವ ಮಾನಸಿಕವಾಗಿ ತೊಂದರೆ ಕೊಟ್ಟರೆ ಕೂಡಲೇ ಶಿಕ್ಷಕರು, ಪೋಷಕರ ಗಮನಕ್ಕೆ ತರಬೇಕು. ಆ ಮೂಲಕ ಹೆಣ್ಣು ಮಕ್ಕಳು ಸದೃಢರಾಗಿ, ಜಾಗೃತರಾಗಿರಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಮಾತನಾಡಿ, ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆಯ ಕೌಶಲ್ಯ ಹೊಂದಲಿ ಎನ್ನುವ ಉದ್ದೇಶದಿಂದ ಈ ವಷರ್À 11229 ಬಾಲಕಿಯರಿಗೆ, ವಸತಿ ನಿಲಯದ 3000 ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿ ನೀಡುವ ಗುರಿಯನ್ನು ಹೊಂದಿದ್ದು, ಕರಾಟೆಯ ಜೊತೆಗೆ ಜೂಡೋ, ಮಾಷರ್Àಲ್ ಆಟ್ರ್ಸ್, ಇನ್ನಿತರೆ ಕಲೆಗಳ ತರಬೇತಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಸ್ಮಾರ್ಟ್ ಸಿಟಿ ಅವರ ಜೊತೆಗೂಡಿ ಹೆಣ್ಣು ಮಕ್ಕಳಿಗಾಗಿ ಸುರಕ್ಷಾ ಆ್ಯಪ್ ತಯಾರಿಸಲಾಗಿದ್ದು, ಇದುವರೆಗೂ 150 ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಪೆÇಲೀಸರು ಕ್ರಮಕೈಗೊಂಡಿದ್ದಾರೆ. ಅದರಂತೆ ಎಲ್ಲಾ ಹೆಣ್ಣು ಮಕ್ಕಳು ಸುರಕ್ಷಾ ಆ್ಯಪ್, ಅಥವಾ 112ಗೆ ಕರೆ ಮಾಡುವ ಮೂಲಕ ಪೆÇಲೀಸರನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು. ಹೆಣ್ಣು ಮಕ್ಕಳು ಶಾಲಾ, ಕಾಲೇಜುಗಳಿಗೆ ಬರುವುದು ಕೇವಲ ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೆ ಅಲ್ಲ, ತಮ್ಮನ್ನು ಕಾಪಾಡಿಕೊಳ್ಳುವುದರ ಜೊತೆಗೆ ಧ್ವನಿ ಇಲ್ಲದವರು ವಿರುದ್ಧ ಧ್ವನಿಯಾಗಬೇಕು. ಆಗ ಮಾತ್ರ ನಿಮಗೆ ನೀವು ಪಡೆದ ಶಿಕ್ಷಣಕ್ಕೆ ಬೆಲೆ ಸಿಗುವುದು.
ನಗರದ ವಿವಿಧ ಇಲಾಖಾ ವ್ಯಾಪ್ತಿಯಲ್ಲಿ ವ್ಯಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿ ರಕ್ಷಣಾ ಕೌಶಲ್ಯಗಳ 10 ಜನ ತರಬೇತುದಾರರಿಗೆ ಸನ್ಮಾನಿಸಲಾಯಿತು. ಹಾಗೂ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ್ದ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ, ಬಿಸಿಎಂ ಅಧಿಕಾರಿ ಗಾಯತ್ರಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ವೀರೇಶ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ.ಸಂತೋಷ್, ಮಂಜುನಾಥ ಉಪಸ್ಥಿತರಿದ್ದರು.