ಶಿವಮೊಗ್ಗ, ಸೆ .13
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃದ್ದಿ ಇಲಾಖೆ, ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 15 ರ ಭಾನುವಾರ ಬೆಳಿಗ್ಗೆ 8.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಾನವ ಸರಪಳಿ ರಚನೆ ಮೂಲಕ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನೆರವೇರಿಸುವರು. ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಭದ್ರಾವತಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ/ಕೆಆರ್‌ಐಡಿಎಲ್‌ನ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಶಿವಮೊಗ್ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಾಲಿಕೆ ಆಯುಕ್ತರು, ಅಧಿಕಾರಿಗಳು, ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.