ಬಾಲಕರ ಮತ್ತು ಅಲ್ಪ ವಯಸ್ಕರ ಬಗೆಗಿನ ಕಾನೂನು ತಿಳಿಯುವುದು ಎಲ್ಲರ ಜವಾಬ್ದಾರಿ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಣ್ಣಯ್ಯನವರ್ ತಿಳಿಸಿದರು.
ಅವರು (ಸೆ.23) ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೆÇಲೀಸ್ ಇಲಾಖೆ ಮತ್ತು ಅಮೃತ ವಿದ್ಯಾಲಯಂ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸೋಮುವಾರ ಹಮ್ಮಿಕೊಳ್ಳಲಾಗಿದ್ದ. ಪೆÇೀಕ್ಸೋ ಮತ್ತು ಬಾಲ್ಯ ವಿವಾಹ ತಡೆಯುವ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ, ವಿದ್ಯಾರ್ಥಿನಿಯರ ತಂದೆ ತಾಯಿಯರು ಮಕ್ಕಳನ್ನು ಶಾಲೆಗೆ ಕಳುಹಿಸಿದ ನಂತರ ಅವರ ಬಗ್ಗೆ ಕಾಳಜಿ ವಹಿಸುವುದು ಅವಶ್ಯವಾಗಿದೆ ಎಂದು ತಿಳಿಸಿದರು.
ಕಾನೂನಿನ ಸಂಘರ್ಷಕ್ಕೆ ಒಳಗಾದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಅμÉ್ಟೀ ಅಲ್ಲದೆ ಭೌತಿಕವಾಗಿ ಕೂಡ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು.
ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರೆÀಣ್ಣವರ್ ಮಾತನಾಡಿ ಮಕ್ಕಳಿಗೆ ನೈತಿಕ ಶಿಕ್ಷಣ ಅವಶ್ಯಕತೆ ಇದೆ, ಮಕ್ಕಳು ಮೊಬೈಲ್‍ಗಳಲ್ಲಿ ಅವಶ್ಯಕತೆಗಿಂತÀ ಅನಾವಶ್ಯಕ ವಿಷಯಗಳ ಬಗ್ಗೆ ಹೆಚ್ಚಿನ ಮಾಹಿತಿ ಹೊಂದಿದ್ದಾರೆ. ಆದ್ದರಿಂದ ಪೋಷಕರು ಇದರ ಬಗ್ಗೆ ಹೆಚ್ಚಿನ ಗಮನಿಸಬೇಕು ಎಂದು ತಿಳಿಸಿದರು.
ಪೆÇೀಕ್ಸೋ ಕಾನೂನು ಮತ್ತು ಬಾಲ್ಯ ವಿವಾಹ ನಿμÉೀಧ ಕಾನೂನು ಬಗ್ಗೆ ಮಾಹಿತಿ ನೀಡಿ, ಇಲಾಖೆಗಳ ಜೊತೆಗೆ ಮಕ್ಕಳು, ಪೆÇೀಷಕರು ಮತ್ತು ಸಾರ್ವಜನಿಕರು ಕೈಜೋಡಿಸಿದಾಗ ಮಾತ್ರ ಕಾನೂನಿನ ಅನುμÁ್ಠನ ಸುಲಭ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಮಾತನಾಡಿ ಪಠ್ಯ ವಿಷಯದ ಜೊತೆಗೆ ಸಾಮಾಜಿಕ ಮೌಲ್ಯಗಳು ಮತ್ತು ದಿನ ಬಳಕೆ ಕಾನೂನುಗಳನ್ನು ಮಕ್ಕಳಿಗೆ ತಿಳಿಸಿಕೊಡುವುದು ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಮಹಿಳಾ ಪೆÇಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಎಸ್.ಡಿ. ನೂರ್ ಅಹಮ್ಮದ್ ಮಾತನಾಡಿ ಸಾರ್ವಜನಿಕರು ಪೆÇಲೀಸರಿಗೆ ಸೂಕ್ತ ಸಮಯದಲ್ಲಿ ಸರಿಯಾದ ಮಾಹಿತಿ ನೀಡಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಹಾಯ ಮಾಡಿ ಎಂದು ಮನವಿ ಮಾಡಿದರು.
ಕಾರ್ಯಕ್ರದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್ , ಅಮೃತ ವಿದ್ಯಾಲಯಂ ಪ್ರಾಂಶುಪಾಲರಾದ ಪ್ರತಿಭಾ ಎನ್, ಅಮೃತ ಪಿ.ಯು.ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಸಿ.ವಿವೇಕ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.