ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಅಹ್ವಾನಿಸಲಾಗಿದೆ.
 ಅರ್ಜಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಚೇರಿ, ಎಂ.ಸಿ.ಸಿ. ಬಿ. ಬ್ಲಾಕ್, ಶಂಕರ್‍ಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ದಾವಣಗೆರೆ ಇಲ್ಲಿ ಪಡೆದು  ಆಕ್ಟೋಬರ್ 15 ರೊಳಗಾಗಿ ಸಲ್ಲಿಸಲು ಹಾಗೂ  ಹೆಚ್ಚಿನ ಮಾಹಿತಿಗಾಗಿ 08192-263936, 263939 ಗೆ ಕರೆ ಮಾಡಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *