ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಾವಣಗೆರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 1 ರಂದು ಬೆಳಗ್ಗೆ 10.30 ಕ್ಕೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ದಾವಣಗೆರೆ ನಗರದ ಎಂಸಿಸಿ ಬಿ. ಬ್ಲಾಕಿನಲ್ಲಿರುವ ವಾಟರ್ ಟ್ಯಾಂಕ್ ಪಾರ್ಕ್ ಎದುರಿನ ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಆಯೋಜಿಸಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟನೆ ಮಾಡುವರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಮಾಯಕೊಂಡ ಶಾಸಕರಾದÀ ಕೆ.ಎಸ್.ಬಸವಂತಪ್ಪ, ಚನ್ನಗಿರಿ ಶಾಸಕರಾದ ಬಸವರಾಜು ವಿ.ಶಿವಗಂಗಾ, ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪ, ಹರಿಹರÀ ಶಾಸಕರಾದ ಬಿ.ಪಿ.ಹರೀಶ್, ಹೊನ್ನಾಳಿ ಶಾಸಕರಾದ ಡಿ.ಜಿ.ಶಾಂತನಗೌಡ, ವಿಧಾನ ಪರಿಷತ್ತು ಸದಸ್ಯರಾದ ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್.ಅರಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಾದ ಚಮನ್ ಸಾಬ್, ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಪಾಲಿಕೆ ಸದಸ್ಯರಾದ ಜಿ.ಎಸ್.ಮಂಜುನಾಥ್ ಗಡಿಗುಡಾಳು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭಾಗವಹಿಸುವರು.
ಅಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಇವರ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್.ಅರುಣ್ಕುಮಾರ್ ಹಿರಿಯ ನಾಗರಿಕರಿಗೆ ಕಾನೂನಿನಲ್ಲಿರುವ ಅವಕಾಶಗಳ ಕುರಿತು ಮಾಹಿತಿ