ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಅಕ್ಟೋಬರ್ 9 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸುವರು.
ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಕುರಿತ ದೂರುಗಳನ್ನು ಸಲ್ಲಿಸಬಹುದು.