ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 11.30ಕ್ಕೆ ನಗರದ ಎಂ.ಸಿ.ಸಿ.ಬಿ ಬ್ಲಾಕ್‍ನಲ್ಲಿರುವ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಯೋಜಿಸಲಾಗಿದೆ.
 ಕಾರ್ಯಕ್ರಮವನ್ನು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಉದ್ಘಾಟಿಸುವರು. ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು ಅಧ್ಯಕ್ಷತೆ ವಹಿಸುವರು.
  ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್.ಕೆ, ವಿಧಾನ ಪರಿಷತ್ ಶಾಸಕರಾದ ಎಸ್.ಎಲ್ ಭೋಜೇಗೌಡ, ಚಿದಾನಂದ. ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ.ನವೀನ್.ಎಸ್.ಮಠದ ಉಪಸ್ಥಿತರಿರುವರು.
 ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಹೊಂಡದ ಸರ್ಕಲ್‍ನಲ್ಲಿರುವ ಶ್ರೀಶ್ರೀಶ್ರೀ ರಾಜವೀರ ಮದಕರಿ ನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುತ್ತದೆ.

Leave a Reply

Your email address will not be published. Required fields are marked *