ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಮಹಾನಗರಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ನವಂಬರ್ 8 ರಂದು ಮಧ್ಯಾಹ್ನ 3 ಗಂಟೆಗೆ ಪಾಲಿಕೆಯ ಸಭಾಂಗಣದಲ್ಲಿ ಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ.
ವೇಳಾಪಟ್ಟಿ: ನ.8 ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ನಾಮಪತ್ರ ಸ್ವೀಕರಿಸುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಿಸಿ ಹಾಜರಾತಿ ಪಡೆಯುವುದು. ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ದ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಮತಪತ್ರಗಳ ಮೂಲಕ ಮತದಾನ ಪ್ರಕ್ರಿಯೆ ನಡೆಸುವುದು, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.