ನ್ಯಾಮತಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದ ಗೌಡನ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ಕೆರೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದ ಕಾರಣ ಮಂಗಳವಾರ ಶಾಸಕ ಡಿ.ಜಿ.ಶಾಂತನಗೌಡ .ಜಿ¯್ಲÁ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಹಿಟ್ನಾಳ್ ಸೇರಿದಂತೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಅತೀವೃಷ್ಟಿಯಿಂದಾದ ಹಾನಿಯನ್ನು ಪರಿಶೀಲನೆ ನಡೆಸಿದರು.
ಮಳೆ ಹೆಚ್ಚಾಗಿ ಕರೆ ಕೋಡಿ ಬಿದ್ದ ಪರಿಣಾಮ ತಗ್ಗು ಪ್ರದೇಶದಲ್ಲಿರುವ ಗ್ರಾಮದ ಕಾಲುವೆ ಮೂಲಕ ಹರಿದು ಹೋಗಬೇಕಾಗಿದ್ದು, ನೀರಿನ ಹರಿವು ತೀವ್ರವಾದ ಕಾರಣ ಸೋಮವಾರ ತಡ ರಾತ್ರಿ ಗ್ರಾಮದ ಜನವಸತಿ ಪ್ರದೇಶಗಳು, ಚರಂಡಿ, ರಸ್ತೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದರಿಂದ ಗ್ರಾಮದ ಸುಮಾರು 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಕಾರಣ ಎಚ್ಚೇತ್ತುಕೊಂಡ ತಾಲೂಕು ಆಡಳಿತ ಕೂಡಲೇ ಸ್ಥಳಕ್ಕೆ ಅಗಮಿಸಿ ಎಸï.ಡಿ, ಆರ್.ಎಫ್ಪï, ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು
ಸ್ಥಳಕ್ಕೆ ಅಗಮಿಸಿ ತೊಂದರೆಗೊಳಗಾದ ಜನರನ್ನು ಗ್ರಾಮದ ಸಮುದಾಯ ಭವನದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಅವರಿಗೆ ಊಟ ವಸಿತಿ ಸೌಲಭ್ಯಗಳನ್ನು ಒದಗಿಸಲಾಗಿದೆ.
ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಅಧಿಕಾರಿಗಳೊಂದಿಗೆ ಹಾನಿಗೊಳಗಾದ ಎ¯್ಲÁ ಪ್ರದೇಶಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ, ಜೆ.ಸಿ.ಬಿ.ಯಂತ್ರಗಳ ಮೂಲಕ ನೀರು ಕಟ್ಟಿಕೊಂಡ ಗ್ರಾಮದ ಎ¯್ಲÁ ಕಾಲುವೆಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಹೋಗುವಂತೆ ಮಾಡುವ ಕೆಲಸಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ತಾಲೂಕಿನಲ್ಲಿ ಶಾಲಾ ಕೊಠಡಿಗಳ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳೊಂದಿಗೆ 8 ಬಾರಿ ಸಭೆ ನಡೆಸಿದ್ದು ಈಗಾಲೇ 120 ಶಾಲಾ ಕೊಠಡಿಗಳ ರಿಪೇರಿಗಳಿಗಾಗಿ 4 ಕೋಟಿ ಹಣ ಅನುದಾನ ನೀಡಲಾಗಿದೆ. ಪ್ರಕೃತಿ ವಿಕೋಪ ನಿಧಿಯಿಂದ 2 ಕೋಟಿ,, ಶಾಸಕರ ನಿಧಿಯಿಂದ 1 ಕೋಟಿ ಜಿ.ಪಂ. ಅನುದಾನದಿಂದ 1 ಕೋಟಿ ಅನುದಾನ ನೀಡಲಾಗಿದೆ ಎಂದು ವಿವರಿಸಿದರು.
ಅತಿವೃಷ್ಠಿಯಿಂದ ಹಾಳಾಗಿರುವ ರಸ್ತೆ.ಚರಂಡಿ, ಮೂಲಭೂತ ವ್ಯವಸ್ಥೆಗಳನ್ನು ಸರಿಪಡಿಸುವ ಕುರಿತು ಅಧಿಕಾರಿಗಳು ಇಂಜನಿಯರ ಗಳು ಈ ಬಗ್ಗೆ ಸಮಗ್ರ ವರದಿ ತಯಾರಿಸಿ ಪ್ರಸ್ತಾವ ಸಲ್ಲಿಸಬೇಕು ನಂತರ ಅನುದಾನ ಮಂಜರಾತಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು
ಇದೇ ವೇಳೆ ಸ್ಥಳದಲ್ಲಿದ್ದ ಜಿ¯್ಲÁ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್ ಹಿಟ್ನಾಳ್ ಮಾತನಾಡಿ, 15ನೇ ಹಣಕಾಸು ಯೋಜನೆಯಡಿ,ಶೇಕಡ 30ರಷ್ಟು ಕುಡಿಯುವ ನೀರಿಗಾಗಿ, ಶೇಕಡ 30ರಷ್ಟು ನೈರ್ಮಲ್ಯ ಕಾರ್ಯಗಳಿಗೆ ನಿಗದಿ ಮಾಡಿದ್ದು ಪ್ರತಿ ಗ್ರಾಮಪಂಚಾಯಿತಿಗೆ 19 ಲP್ಷÀ ಅನುದಾನ ನೀಡಿದೆ ನರೇಗಾ ಯೋಜನೆಯಡಿ. ಜಿ.ಪಂ. ಹಂತದಲ್ಲಿ 4 ಕೋಟಿ, ತಾ.ಪಂ. ಹಂತದಲ್ಲಿ 2 ಕೋಟಿ ಅನುದಾನ ಮಂಜೂರಾಗಿದ್ದು, ನ್ಯಾಮತಿ ತಾಲೂಕಿಗೆ ಈಗಾಗಲೇ 1.65 ಕೋಟಿ ಅನುದಾನ ಮಂಜೂರಾಗಿದೆ ಎಂದರು.
ಇದೀಗ ಯರಗನಾಳ್ ಗ್ರಾಮದ ಕೆರೆ ಕೋಡಿ ಬಿದ್ದು ಸಾಕಷ್ಟು ತೊಂದರೆಯಾಗಿದ್ದು, , ಮುಂದಿನ ದಿನಗಳಲ್ಲಿ ಹೀಗಾಗದಂತೆ ತಡೆಯಲು ಕೆರೆ ಕೆಳಭಾಗದಲ್ಲಿ ಸುಮಾರು 35 ಲP್ಷÀದಲ್ಲಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಜೊತೆಗೆ ರಸ್ತೆ.ಚರಂಡಿ, ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಕೂಡ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೊನ್ನಾಳಿ ಉಪವಿಭಾಗಾದ ಉಪವಿಭಾಗಾಧಿಕಾರಿ ವಿ.ಅಭೇಷಕï, ನ್ಯಾಮತಿ ತಾಲೂಕು ತಹಶೀಲ್ದಾರ ಗೋವಿಂದಪ್ಪ, ನ್ಯಾಮತಿ ತಾ.ಪಂ., ಇ.ಓ.ರಾಘವೇಂದ್ರ, ಯರಗನಾಳ್ ಗ್ರಾ.ಪಂ. ಅಧ್ಯಕ್ಷೆ ಸವಿತಾ, ಉಪಾಧ್ಯP್ಷÀರು, ಸದಸ್ಯರುಗಳು, ಪಿ.ಡಿ..ಓ. ಮಂಜುನಾಥï,ಪ್ರದೀಪï,ಕಂದಾಯ ಇಲಾಖೆಯ ರಾಜಸ್ವನಿರೀP್ಷÀಕರು, ಗ್ರಾಮಲೆಕ್ಕಾಧಿಕಾರಿಗಳುಇದ್ದರು.