ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಭ್ರμÁ್ಟಚಾರವನ್ನು ತೊಲಗಿಸಲು ಆಡಳಿತದಲ್ಲಿ ಪಾರದರ್ಶಕತೆ, ನಿಸ್ವಾರ್ಥ ಸೇವೆ ಸಾರ್ವಜನಿಕ ಸೇವೆಯಲ್ಲಿ ಮೂಡಿಬರಬೇಕಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.
   ಅವರು (ಅ.29) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಲೋಕಾಯುಕ್ತ ವಿಭಾಗ, ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಆಯೋಜಿಸಿದ ಭ್ರಷ್ಟಾಚಾರ ನಿರ್ಮೂಲನಾ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭ್ರμÁ್ಟಚಾರವು ನಿರಂತರ ಸೇವೆ ಹಾಗೂ ಪ್ರಾಮಾಣಿಕತೆಯನ್ನು ತಿಂದು ಹಾಕುತ್ತದೆ, ಸಮಾಜ ಕಲುಷಿತಗೊಂಡರೆ, ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಪ್ರತಿಯೊಬ್ಬರು ಪಾರದರ್ಶಕವಾಗಿ ಮತ್ತು ಆತ್ಮಸಾಕ್ಷಿಯಿಂದ ತಮ್ಮ ಜವಾಬ್ದಾರಿಯ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ತಿಳಿಸಿದರು.
 . ಸರ್ಕಾರಿ ನೌಕರರು, ಖಾಸಗಿ ವಲಯಗಳ ನೌಕರರು ಸೇರಿದಂತೆ ಭ್ರμÁ್ಟಚಾರ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಬೇಕು. ಸ್ವಯಂ ಪ್ರೇರಿತವಾಗಿ ಭ್ರμÁ್ಟಚಾರ ನಿರ್ಮೂಲನೆಗೆ ಅನೇಕರು ಹೋರಾಡುತ್ತಿದ್ದಾರೆ. ಅಂತಹವರಿಗೆ ಬೆಂಬಲ ನೀಡಬೇಕು ಎಂದು ಹೇಳಿದರು.
   ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಮಾಹಿತಿ ಹಾಗೂ ಸರ್ಕಾರಿ ಸೇವೆಗಳಿಗಾಗಿ ಬಂದಲ್ಲಿ ಅವರಿಗೆ ಉತ್ತಮ ಸೇವೆ ಒದಗಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಂದ ಯಾವುದೇ ಹಣದ ಬೇಡಿಕೆ ಇಡದೇ ಪಾರದರ್ಶಕ ಸೇವೆ ನೀಡಬೇಕು. ಅμÉ್ಟೀ ಅಲ್ಲದೇ ಭ್ರμÁ್ಟಚಾರ ನಡೆದ ಕುರಿತು ಮಾಹಿತಿ ದೊರೆತಲ್ಲಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಮಾಡಬೇಕು ಎಂದು ತಿಳಿಸಿದರು.
  ಸರ್ಕಾರಿ ವಲಯಗಳ ಸೇವೆಯ ಕುರಿತು ಸಾರ್ವಜನಿಕರಿಗೆ ಭರವಸೆ ಮೂಡಬೇಕು. ಸರ್ಕಾರಿ ಕಚೇರಿಗೆ ಮುಕ್ತವಾಗಿ ಬಂದು ನಿಗದಿತ ಅವಧಿಯಲ್ಲಿ ಸೇವೆಗಳನ್ನು ಪಡೆಯುವಂತೆ ಅವರಿಗೆ ಉತ್ತಮ ಸೇವೆ ನೀಡಬೇಕು. ಸಾರ್ವಜನಿಕರು ಸಹ ತಮ್ಮ ಸೇವೆಗಳನ್ನು ಪಡೆಯಲು ಯಾವುದೇ ಲಂಚ, ಆಮಿಷಗಳನ್ನು ನೀಡದೆ ಸೂಕ್ತ ಮಾಹಿತಿ ಹಾಗೂ ಸೇವೆಗಳನ್ನು ಪಡೆದುಕೊಳ್ಳಬೇಕು ಎಂದರು.
 ಕೇಂದ್ರದಲ್ಲಿ ಸೆಂಟ್ರಲ್ ವಿಜಿಲೆನ್ಸ್ ಕಮಿಷನ್, ರಾಜ್ಯದಲ್ಲಿ ಲೋಕಾಯುಕ್ತ ಭ್ರμÁ್ಟಚಾರದ ವಿರುದ್ಧ ಕಾರ್ಯ ನಿರ್ವಹಿಸುತ್ತಿವೆ. “ಭ್ರμÁ್ಟಚಾರ ವಿರೋಧಿಸಿ, ರಾಷ್ಟ್ರದ ಏಳಿಗಾಗಿ ಸಮಗ್ರತೆಯ ಸಂಸ್ಕøತಿ“ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಜಿಲ್ಲೆಯಲ್ಲಿ ಭ್ರμÁ್ಟಚಾರ ಮುಕ್ತ ಅರಿವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು.
  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಮಾತನಾಡಿ, ಪ್ರತಿ ಸÀರ್ಕಾರಿ ನೌಕರರಲ್ಲಿ ಕರ್ತವ್ಯ ಪ್ರಜ್ಞೆ, ಪ್ರಾಮಾಣಿಕತೆ ಮತ್ತು ಮಾನವೀಯತೆ ಇದ್ದಾಗ ಯಾವ ಸಮಸ್ಯೆಗಳು ಬರುವುದಿಲ್ಲ. ಮತ್ತು ಬೇರೆಯವರಿಗೆ ತೊಂದರೆಯೂ ಆಗುವುದಿಲ್ಲ ಎಂದು ಹೇಳಿದರು.
   ಅತಿ ಆಸೆ ಪಡದೆ, ಬಂದಿರುವ ಪಾಲನ್ನು ಅನುಭವಿಸಬೇಕು. ಪ್ರತಿಯೊಬ್ಬರಿಗೆ ಕೆಲಸದಲ್ಲಿ ತೃಪ್ತಿ, ಉತ್ತಮ ಆರೋಗ್ಯ ಮುಖ್ಯ. ಸದ್ಭಾವನೆಯಿಂದ ಕರ್ತವ್ಯ ನಿರ್ವಹಿಸಿದರೆ ಬದುಕು ಸುಂದರವಾಗಿರುತ್ತದೆ ಎಂದು ತಿಳಿಸಿದರು.
  ಜನನ, ಮರಣ ಪ್ರಮಾಣ ಪತ್ರ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಂಶವೃಕ್ಷ, ಇಂತಹ ಮೂಲ ಕೆಲಸಗಳನ್ನು ಯಾವುದೇ ವಿಳಂಬ ಮಾಡದೆ ತ್ವರಿತವಾಗಿ ನೀಡಬೇಕು. ಅಧಿಕಾರಿಗಳು ಹಾಗೂ ನೌಕರರು ಕಚೇರಿಗೆ ಸಮಯಕ್ಕೆ ಸರಿಯಾಗಿ ಬಂದು, ಅಂದಿನ ಕೆಲಸವನ್ನು ಅಂದೇ ನಿರ್ವಹಿಸಿ ನಿಗಧಿತ ಸಮಯಕ್ಕೆ ಮನೆಗೆ ಹೋಗಬೇಕು ಎಂದು ತಿಳಿಸಿದರು.
  ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ಟಾಳ್ ಮಾತನಾಡಿ ಸರ್ಕಾರಿ ಅಧಿಕಾರಿ, ನೌಕರರು ಕಾನೂನಿನ ಚೌಕಟ್ಟು ಹಾಗೂ ಆತ್ಮಸಾಕ್ಷಿಯೊಂದಿಗೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಕೆಲವೊಮ್ಮೆ ಕಾಯ್ದೆ, ಕಾನೂನಿನ ಆಚೆ ಕೆಲವು ವಿವೇಚನಾ ಅಧಿಕಾರ ಚಲಾಯಿಸುವ ಸಂದರ್ಭ ಒದಗಿಬರುತ್ತದೆ. ಅಂತಹ ಸಂದರ್ಭದಲ್ಲಿ ಪ್ರತಿ ಕೆಲಸವನ್ನು ನ್ಯಾಯಬದ್ದವಾಗಿ, ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಕರ್ತತ್ಯನಿಷ್ಟತೆ ಸಮರ್ಪಕವಾಗಿ ಇರಬೇಕೆಂದು ತಿಳಿಸಿದರು.
    ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ್ ಮಾ.ಕರೆÀಣ್ಣವರ್ ಪ್ರಾಸ್ತಾವಿಕವಾಗಿ ಮಾತನಾಡಿದರು.  ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಅಭಿಯಾನದ ಕುರಿತು ಜಾಗೃತಿ ಅರಿವು ಸಪ್ತಾಹ 2024ರ ಭ್ರμÁ್ಟಚಾರ ನಿಯಂತ್ರಣದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
  ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

Leave a Reply

Your email address will not be published. Required fields are marked *