ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಸಿ.ಇ.ಟಿ, ಹಾಗೂ ಎನ್.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
  18 ರಿಂದ 35 ವರ್ಷದ ಒಳಗಿನವರಾಗಿ, ಕುಟುಂಬದ ವಾರ್ಷಿಕ ಆದಾಯ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ವಿದ್ಯಾಭ್ಯಾಸ ಪೂರ್ಣಗೊಂಡ 4 ತಿಂಗಳ  ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
  ಅಸಕ್ತರು ಡಿಸೆಂಬರ್ 15 ರೊಳಗಾಗಿ kacdc.karnataka.gov.ind  ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 08192230934 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕಿ ರೂಪ ಎಸ್.ಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *