ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ರವರ ಪರ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರು ಮತ್ತು ಉನ್ನತ ಶಿಕ್ಷಣ ಸಚಿವರಾದ ಸುಧಾಕರ್ ರವರು ಸಂತೆಮೊಗೇಹಳ್ಳಿ ಮತ್ತು ಮಳೂರು ಪಟ್ಚಣದಲ್ಲಿ ಸಭೆಗಳನ್ನು ನಡೆಸಿ ಮತಯಾಚನೆ ಮಾಡಿದರು,
ಇದೇ ಸಂದರ್ಭದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿರವರು ಮಾತನಾಡಿ ಚನ್ನಪಟ್ಟಣದ ಜನರ ಕಷ್ಟ, ಸಮಸ್ಯೆಗಳನ್ನು ನಿರಂತರವಾಗಿ ಅಲಿಸಿ ಕ್ಷೇತ್ರದ ಜನರ ಸಮಸ್ಯೆಯನ್ನ ಪರಿಹರಿಸುತ್ತಿರುವ ಡಿ.ಕೆ.ಸುರೇಶ್, ಸಿ.ಪಿ.ಯೋಗೇಶ್ವರ್ ರವರು ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಅತ್ಯಂತ ಶ್ರಮವಹಿಸಿ ದುಡಿದಿದ್ದಾರೆ,
ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಆಶ್ರಯ ಮನೆಗಳು ಮತ್ತು ಕೊಟ್ಯಂತರ ಅನುದಾನದಲ್ಲಿ ರಸ್ತೆ ನಿರ್ಮಾಣವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಅಭಿವೃದ್ದಿಯೆ ಮೂಲಮಂತ್ರ .
ಚನ್ನಪಟ್ಟಣ ತಾಲೂಕಿನಲ್ಲಿ ಅತಿ ಹೆಚ್ಚು ಕೆರೆಗಳನ್ನು ನಿರ್ಮಿಸಲು ಕಾಂಗ್ರೆಸ್ ಸರ್ಕಾರದ ಕೊಡುಗೆ ಅಪಾರವಾಗಿದೆ,
ಕಣ್ವ ಡ್ಯಾಂ ಹರಿದು ಹೋಗುವ 9 ಕಡೆಗಳಲ್ಲಿ ಸೇತುವೆ ನಿರ್ಮಿಸಲಾಗುವುದು ಇದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ.
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಕುಟುಂಬಗಳಿಗೆ ತಲುಪಿದೆ.
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳು ಮಹಿಳೆಯರ ಸ್ವಾವಲಂಭಿ ಜೀವನ, ಸ್ವಾಭಿಮಾನಿಯಾಗಿ ಬದುಕಲು ಆಸರೆಯಾಗಿದೆ.
ನವಂಬರ್ 13ನೇ ತಾರೀಖು ನಡೆಯುವ ಉಪ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ರವರಿಗೆ ಮತ ನೀಡಿ ಅಭಿವೃದ್ದಿಗೆ ಕೈಜೋಡಿಸಬೇಕು ಎಂದು ಮತದಾರರಲ್ಲಿ ವಿನಂತಿ ಮಾಡಿಕೊಂಡರು,ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂ. ಈ. ಐ ಸಂಸ್ಥೆಯ ಅಧ್ಯಕ್ಷರಾದ ಎಸ್. ಮನೋಹರ್, ಮುಖಂಡರಗಳಾದ ಎಂ.ಎ. ಸಲೀಮ್, ಎ.ಆನಂದ್,ಚಂದ್ರಶೇಖರ್ , ಹೇಮರಾಜ್, ಪುಟ್ಟರಾಜ್,ಇದ್ದರು.