ದಾವಣಗೆರೆ ನ.7 ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರ್.ಎಲ್ ಕಾನೂನು ಮಹಾವಿದ್ಯಾಲಯ ಮತ್ತು ವಕೀಲರ ಸಂಘ, ದಾವಣಗೆರೆ ಇವರ ಸಹಯೋಗದಲ್ಲಿ ನವಂಬರ್ 9 ರಂದು ನಗರದ ಆರ್.ಎಲ್ ಕಾನೂನು ಮಹಾವಿದ್ಯಾಲಯದ ಸಭಾಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಅಂಗವಾಗಿ ಕಾನೂನು ನೆರವು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ.ಎನ್ ಹೆಗಡೆ ಉದ್ಘಾಟಿಸುವರು. ಆರ್.ಎಲ್ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ.ಯತೀಶ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ನಿವೇದಿತಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್ ಅರುಣಕುಮಾರ್, ಆರ್.ಎಲ್ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ವಿದ್ಯಾಧರ ವೇದವರ್ಮ ಭಾಗವಹಿಸುವರು.