ದಾವಣಗೆರೆ ನ.13 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಮಕ್ಕಳ ಪಾಲನಾ ಕೇಂದ್ರಗಳು ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ನವಂಬರ್ 13 ರಂದು ನಗರದ ಜಯದೇವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬಾಹಿರವಾಗಿ ಮಕ್ಕಳ ಮಾರಾಟ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
   ಜಾಥಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎA ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ್ ಮಾ.ಕರೆಣ್ಣವರ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
 ಜಾಥವು ಜಯದೇವ ವೃತ್ತದಿಂದ ಪ್ರಾರಂಭಗೊAಡು ಡಾ.ಬಿ.ಆರ್ ಅಂಬೆಡ್ಕರ್ ರಸ್ತೆ ಹಾಗೂ ವಿದ್ಯಾರ್ಥಿ ಭವನ ರಸ್ತೆ ಮೂಲಕ ಸಾಗಿ ಗುಂಡಿಮಹಾದೇವಪ್ಪ ವೃತ್ತದಲ್ಲಿ ಮುಕ್ತಾಯವಾಯಿತು.
  ಜಾಥದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯ್ ಕುಮಾರ್ ಎಂ.ಸAತೋಷ್, ಉಪವಿಭಾಗಧಿಕಾರಿ ಸಂತೋಷ್ ಪಾಟೀಲ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ರಾಜನಾಯ್ಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತ ಟಿ.ಎನ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *