ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಬರುವ ಕೃಷಿ ಹುಟ್ಟುವಳಿಗಳಾದ ಮೆಕ್ಕೆಜೋಳ, ರಾಗಿ, ಹತ್ತಿ, ತೊಗರಿ, ಅಡಿಕೆ, ಸೂರ್ಯಕಾಂತಿ, ಶೇಂಗಾ ಉತ್ಪನ್ನಗಳಿಗೆ ಈಗಾಗಲೇ ಇ-ಟೆಂಡರ್ ವ್ಯವಸ್ಥೆ ಜಾರಿ ಮಾಡಲಾಗಿದೆ.
ನವಂಬರ್ 25 ರಿಂದ ಭತ್ತ ಉತ್ಪನ್ನವನ್ನೂ ಸಹ ಇ-ಟೆಂಡರ್ ವ್ಯವಸ್ಥೆಯಲ್ಲಿ ಜಾರಿಗೊಳಿಸಿದ್ದು, ಇದರಿಂದ ರೈತರ ಬೆಳೆಗಳಿಗೆ ಸ್ಪರ್ಧಾತ್ಮಕ ಬೆಲೆಯು ಸಿಗುತ್ತಿರುವುದರಿಂದ ಜಿಲ್ಲೆಯ ರೈತರು ತಾವು ಬೆಳೆದ ಭತ್ತ ಉತ್ಪನ್ನವನ್ನು ಒಣಗಿಸಿ, ಸ್ವಚ್ಚಗೊಳಿಸಿ ದಾವಣಗೆರೆಯ ಎಪಿಎಂಸಿ ಪ್ರಾಂಗಣಕ್ಕೆ ತಂದು ಇ-ಟೆಂಡರ್ ಮೂಲಕ ಮಾರಾಟ ಮಾಡಿ ಸ್ಪರ್ಧಾತ್ಮಕ ಬೆಲೆಯನ್ನು ಪಡೆದುಕೊಳ್ಳಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ತಿಳಿಸಿದ್ದಾರೆ.