ನ್ಯಾಮತಿ ತಾಲೂಕು ಸೂರುಹೊನ್ನೆ ಗ್ರಾಮದಲ್ಲಿ ಶನಿವಾರದಂದು ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬೆಳಗುತ್ತಿ ವಲಯ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ, ಜವಹರಲಾಲ್ ನೆಹರುರವರ ಜನ್ಮದಿನ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಡಿಜಿ ಶಾಂತನಗೌಡ್ರುರವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪ, ಅವಳಿ ತಾಲೂಕಿನ ಸಿಡಿಪಿಓ ಜ್ಯೋತಿ, ಪಿಡಿಒ ವಿಜಯ್ ಕುಮಾರ್, ಕಾಂಗ್ರೆಸ್ ಪಕ್ಷದ ಮುಖಂಡ ಉಮೇಶ್ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಭಾಗವಹಿಸಿದ್ದರು.