ನ್ಯಾಮತಿ:ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಈ ಭಾಗದಲ್ಲಿ ನ್ಯಾಮತಿ ಪಟ್ಟಣzವರೇ ಹೆಚ್ಚು ಜನರು ಇದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ತಾಲ್ಲೂಕು ಆqಳಿÀತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಜಂಟಿಯಾಗಿ ಭಾನುವಾರ ಆಚರಿಸಿದ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಟ್ಟಣದಲ್ಲಿರುವ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಹಾಗೂ ಆಸ್ಪತ್ರೆಗಳು ಇರುವ ಕಟ್ಟಡಗಳ ಜಾಗ ಇಲ್ಲಿಯ ಉದಾರ ಮನಸ್ಸಿನ ಹಿರಿಯರು ದಾನ ಮಾಡಿರುವ ಜಮೀನುಗಳಾಗಿವೆ ಎಂದರು.
ಡಾ.ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳಿಂದ ಬಡವರಿಗೆ ಅನುಕೂಲವಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಅಭಿವೃದ್ಧಿಗೆ ಒತ್ತು ನೀಡುವುದಾಗಿ ತಿಳಿಸಿದರು.
ಇದಕ್ಕೊ ಮೊದಲು ತಾಲ್ಲೂಕು ದಂಡಾಧಿಕಾರಿ ಎಚ್.ಬಿ.ಗೋವಿಂದಪ್ಪ ಅವರು ಧ್ವಜಾರೋಹಣ ನೆರವೇರಿಸಿ ಸಂದೇಶವನ್ನು ಓದಿದರು.
ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಪೊಲೀಸರು, ಗೃಹರಕ್ಷಕದಳದವರು ಪಥಸಂಚಲನಾ ನಡೆಸಿದರು.
ಮಾಜಿ ಶಾಸಕ ಡಾ.ಡಿ.ಬಿ.ಗಂಗಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಎಚ್.ಟಿ.ರಾಘವೇಂದ್ರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶರಾವ್, ಪೊಲೀಸ್ ಇನ್ಸ್‍ಪೆಕ್ಟರ್ ಎನ್.ಎಸ್.ರವಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಪ್ಪ ಜಿಗಣಪ್ಪg, ಬೆಸ್ಕಾಂ ಎಂಜಿನಿಯರ್ ಬಿ.ಕೆ.ಶ್ರೀನಿವಾಸ ಹಾಗೂ ವಿವಿಧ ಶಾಲಾ-ಕಾಲೇಜುಗಳ, ಕಚೇರಿಗಳ ಮುಖ್ಯಸ್ಥರು, ಕಂದಾಯ ಇಲಾಖೆಯ ಸಿಬ್ಬಂದಿ ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಎಸ್‍ಎಸ್‍ಎಲ್‍ಸಿ, ಪಿಯುಸಿ ತರಗತಿಗಳಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ತಾಲ್ಲೂಕು ವತಿಯಿಂದ ಗೌರವಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

You missed