ಪಶುಪಾಲನ ಮತ್ತು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಫೆಬ್ರವರಿ 20 ಮತ್ತು 21 ರಂದು ಎರಡು ದಿನಗಳ ಹಂದಿ ಸಾಕಾಣಿಕೆ ತರಬೇತಿಯನ್ನು ನೀಡಲಾಗುವುದು.
ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್ ಪಾಸ್ ಪೆÇೀಟೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಲು ತಿಳಿಸಲಾಗಿದೆ. ಹೆಚ್ಚಿನ ವಿವರಕ್ಕಾಗಿ ದೂರವಾಣಿ ಸಂಖ್ಯೆ 08192 233787 ಗೆ ಸಂಪರ್ಕಿಸಲು ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
