ಶಿವಾಜಿ ಮಹಾರಾಜರ ಹೋರಾಟ ಮನೋಭಾವ, ಧೈರ್ಯ ಹಾಗೂ ಶೌರ್ಯ ಇಂದಿನ ಜನಾಂಗಕ್ಕೆ ಸ್ಪೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ವತಿಯಿಂದ ಬುಧವಾರ ಜಿಲ್ಲಾಡಳಿತ ಕಚೇರಿ ಆಯೋಜಿಸಲಾಗಿದ್ದ, ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ಬಳಿಕ ಅವರು ಮಾತಾನಾಡಿದರು.
ಶೌರ್ಯಕ್ಕೆ ಮತ್ತೊಂದು ಹೆಸರು ಛತ್ರಪತಿ ಶಿವಾಜಿ. ಶೋಷಿತರ, ಮಹಿಳೆಯರ, ಬಡವರ ಪರವಾಗಿ ಶಿವಾಜಿ ಕೆಲಸ ಮಾಡಿದರು. ಚಿಕ್ಕಂದಿನಿAದಲೇ ನಾಯಕತ್ವದ ಗುಣಗಳನ್ನು ಶಿವಾಜಿ ಮೈಗೂಡಿಸಿಕೊಂಡಿದ್ದರು. ಸಮಾಜದ ಎಲ್ಲಾ ವರ್ಗದ ಜನರನ್ನು ರಕ್ಷಣೆ ಮಾಡಿದ್ದರು. ಹಿಂದೂ ಧರ್ಮ ರಕ್ಷಣೆ ಮಾಡಿದ ಕೀರ್ತಿ ಶಿವಾಜಿಗೆ ಸಲ್ಲುತ್ತದೆ. ಮೊಘಲರ ವಿರುದ್ಧ ಅನೇಕ ಯುದ್ಧಗಳನ್ನು ಮಾಡಿ ಅವರನ್ನು ಸೋಲಿಸಿ ಮರಾಠ ಚಕ್ರವರ್ತಿ ಎಂದು ಗುರುತಿಸಿಕೊಂಡರು. ಇಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಸರ್ಕಾರದಿಂದ ಆಚರಿಸುತ್ತಿರುವುದು ಸಂತಸ ಎನಿಸುತ್ತದೆ. ಶಿವಾಜಿಯ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮಾಜದ ಏಳಿಗೆಗಾಗಿ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಗಂಗಾಧರ್ ಹೇಳಿದರು.
ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಮಹಾನಗರಪಾ ಪಾಲಿಕೆಯ ಮಹಾಪೌರ ಚಮನ್ ಸಾಬ್.ಕೆ, ಪಾಲಿಕೆ ಆಯುಕ್ತೆ ರೇಣುಕಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘ(ರಿ)ದ ಗೌರವಾಧ್ಯಕ್ಷರಾದ ಯಶವಂತರಾವ್ ಜಾಧವ್, ಅಧ್ಯಕ್ಷರಾದ ಡಿ. ಮಾಲತೇಶರಾವ್ ಜಾದವ್, ಸಂಘದ ಪದಾಧಿಕಾರಿಗಳು ಉಪಸ್ಥಿತಿರಿದ್ದರು.
