: ಸರ್ವಜ್ಞ ಕವಿಯು ತಮ್ಮ ತ್ರಿಪದಿಗಳ ಮೂಲಕ ಜೀವನದ ಅನುಭವ ಕಲಿಸಿಕೊಟ್ಟು, ಬದುಕಿನ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹೇಳಿದರು.
    ಗುರುವಾರ(ಫೆ.20) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ತ್ರಿಪದಿ ಕವಿ ಶ್ರೀಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸರ್ವಜ್ಞನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
 ಸರ್ವಜ್ಞ ನವರು ಸಮಾಜದ ಅಂಕುಡೊಂಕುಗಳನ್ನು ತ್ರಿಪದಿಯಲ್ಲಿ ವರ್ಣನೆ ಮಾಡಿದ್ದಾರೆ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯೋಣ ಎಂದು ಹೇಳಿದರು. ಸರ್ವಜ್ಞ ಸತ್ಯ ಶುದ್ಧವಾದ ಕಾಯಕವನ್ನು ಮಾಡುತ್ತಾ ಅನೇಕ ರೀತಿಯಲ್ಲಿ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ.
     ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಮಾತನಾಡಿ, ಸರ್ವಜ್ಞ ಎಂದರೆ ಎಲ್ಲವನ್ನು ತಿಳಿದವನು, ಸಮಾಜದ ಜ್ಞಾನವನ್ನು ಅರಿತವನು. ಸರ್ವಜ್ಞ ಕವಿ ವಿದ್ಯೆ, ಕೃಷಿ ಹಾಗೂ ಜೀವನದ ಕುರಿತ ಆಳವನ್ನು ಅಳೆಯುವುದರ ಮೂಲಕ ದೊಡ್ಡ ವ್ಯಕ್ತಿತ್ವವನ್ನು ಹೊಂದಿದ್ದರು. ಅವರ ತ್ರಿಪದಿಗಳಲ್ಲಿ ಒಳ ಅರಿವು ಜಾಸ್ತಿ ಇದ್ದು, ಶ್ರೀಸಾಮಾನ್ಯರಿಗೂ ಅರ್ಥವಾಗುವಂತಿರುತ್ತದೆ. ಸರ್ವಜ್ಞರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವಂಥ ಕೆಲಸವನ್ನು ಮಾಡಬೇಕು ಎಂದರು.
    ಸಮಾಜದ ಅಧ್ಯಕ್ಷ ಪುಷ್ಪರಾಜ್ ತ್ರಿಪದಿ ಎಂದರೆ ಮೂರು ಸಾಲುಗಳ ಕವಿತೆ. ಆದ್ದರಿಂದ ಸರ್ವಜ್ಞನನ್ನು ತ್ರಿಪದಿ ಕವಿ ಎನ್ನುತ್ತಾರೆ. ಸರ್ವಜ್ಞರ ವ್ಯಕ್ತಿತ್ವ ಅನಿಕೇತನವಾದದ್ದು. ನಿಂತಲ್ಲಿ ನಿಲ್ಲದೆ, ಗಾಳಿಯಂತೆ ಅಲೆದವನು ಇವರು. ಮಂಡೆ ಬೋಳಿಸಿಕೊಂಡು ತುಂಡುಗಂಬಳಿ ಹೊದೆದು ಹಿಂಡನಗಲಿದ ಗಜದಂತೆ ಸುತ್ತಿದವನು. ಕೈಯಲ್ಲೊಂದು ಕಪ್ಪರವನ್ನು ಹಿಡಿದು, ಹಿರಿದಾದ ನಾಡು ಎದುರಿಗಿರುವಾಗ ಪರಮೇಶನೆಂಬ ನಾಮವನ್ನು ನೆಚ್ಚಿ, ತಿರಿಯುತ್ತಲೇ ಊರೂರು ಸುತ್ತಿದ ಚಾರಣ ಕವಿ ಎಂದರು.
     ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ,  ಕುಂಬಾರ ಸಮಾಜದ ಕಾರ್ಯದರ್ಶಿ ತಿಪ್ಪೇಸ್ವಾಮಿ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed