ದ್ವಿತೀಯ ಪಿಯುಸಿ ಪರೀಕ್ಷೆ  ಮಾರ್ಚ್ 1 ರಿಂದ 20 ರವರೆಗೆ  ನಡೆಯುತ್ತದೆ. ಪರೀಕ್ಷಾ ಕಾರ್ಯದಲ್ಲಿ ಲೋಪವಾಗದಂತೆ ಕೋರ್ಯನಿರ್ವಹಿಸಬೇಕೆಂದು ಅಪರ ಜೀಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.
 ಬುಧವಾರ (ಫೆ.19)ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಆಯೋಜಿಸಲಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ  ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪರೀಕ್ಷೆಗೆ  ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು, ಪ್ರಾಂಶುಪಾಲರು,  ಉಪನ್ಯಾಸಕರು ಶ್ರಮವಹಿಸಿ,  ಬಹಳ ಎಚ್ಚರಿಕೆಯಿಂದ  ಜಿಲ್ಲೆಗೆ ಉತ್ತಮ ಹಾಗೂ ಹೆಚ್ಚಿನ ಫಲಿತಾಂಶ  ತರುವಲ್ಲಿ ತಮ್ಮಗಳ ಜವಾಬ್ದಾರಿ ಇದ್ದು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಎಂದು ಸೂಚಿಸಿದರು.
ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಸಿದ್ಧತೆ  ಮಾಡಿಕೊಂಡ ಬಗ್ಗೆ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪರೀಕ್ಷಾ ಕಾರ್ಯ ನಿರ್ವಹಿಸುವಲ್ಲಿ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತೆ ಬೇಡ, ನಿಯಮಗಳನ್ನು ಸರಿಯಾದ ರೀತಿಯಲ್ಲಿ ಪಾಲನೆ ಮಾಡದಿದ್ದರೆ ಸಂಬAಧಪಟ್ಟ ಅಧಿಕಾರಿಗಳನ್ನು ನೇರವಾಗಿ ಹೊಣೆ ಮಾಡಲಾಗುವುದು ಎಂದು ಹೇಳಿದರು.
ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಉಪನಿರ್ದೇಶಕರಾದ ಕರಿಸಿದ್ದಪ್ಪ ಜಿ. ಮಾತನಾಡಿ ದಾವಣಗೆರೆ ತಾಲ್ಲೂಕಿನಲ್ಲಿ 20 ಕೇಂದ್ರಗಳು, ಹರಿಹರದಲ್ಲಿ 4, ಜಗಳೂರಿನಲ್ಲಿ 3, ಚನ್ನಗಿರಿಯ 5, ಹೊನ್ನಾಳಿಯ 3 ಕೇಂದ್ರಗಳು ಸೇರಿದಂತೆ ಒಟ್ಟು 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಕೇಂದ್ರಗಳಲ್ಲಿ 21,153 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದೊಳಗೆ ಕರ್ತವ್ಯ ನಿರತ ಸಿಬ್ಬಂದಿ ಹೊರತುಪಡಿಸಿ, ಇತರೆ ಯಾರಿಗೂ ಪ್ರವೇಶ ಇರುವುದಿಲ್ಲ ಎಂದರು.
  ಪರೀಕ್ಷಾ ವೇಳಾಪಟ್ಟಿ :  ಮಾ. 1 ರಂದು ಕನ್ನಡ, ಅರೇಬಿಕ್. ಮಾ. 3-ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ. ಮಾ. 4-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್. ಮಾ. 5-ರಾಜ್ಯ ಶಾಸ್ತ್ರ, ಸಂಖ್ಯಾ ಶಾಸ್ತ್ರ. ಮಾ. 7-ಇತಿಹಾಸ, ಭೌತಶಾಸ್ತ್ರ. ಮಾ. 10-ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ. ಮಾ. 12-ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ. ಮಾ. 13-ಅರ್ಥ ಶಾಸ್ತ್ರ. ಮಾ. 15- ಇಂಗ್ಲೀಷ್. ಮಾ. 17-ಭೂಗೋಳಶಾಸ್ತ್ರ, ಮಾ. 18-ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ. ಮಾ. 19-ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್. ಮಾ.20- ಹಿಂದಿ.
 ವೆಬ್ ಕ್ಯಾಮೆರಾ ಮತ್ತು ಸಿಸಿಟಿವಿಗಳ ಬಗ್ಗೆ ಪರೀಕ್ಷೆ ಕೇಂದ್ರದ ಮುಖ್ಯ ನಿರೀಕ್ಷಕರು ಗಮನ ಹರಿಸಬೇಕೆಂದು ತಿಳಿಸಿದರು.
    35 ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದ್ದು, ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಅಗತ್ಯ ಕ್ರಮ ವಹಿಸಲಾಗುವುದು.
 ಪ್ರಶ್ನೆ ಪತ್ರಿಕೆಯನ್ನು ಸ್ವೀಕರಿಸಿ , ಪರೀಕ್ಷಾ ಕೇಂದ್ರಗಳಿಗೆ ವಿತರಿಸುವ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಲಾಗುವುದು.  ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗುವುದು’ ಎಂದರು.
 ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊಬೈಲ್ ಸೇರಿದಂತೆ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು  ತರುವಂತಿಲ್ಲ. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಬೇಕು ಎಂದರು.
   ಡಿಡಿಪಿಐ ಕೊಟ್ರೇಶ್ , ಡಯಟ್ ಉಪನಿರ್ದೇಶಕರಾದ ಗೀತಾ, ಖಜಾನೆ ಇಲಾಖೆಯ ಉಪನಿರ್ದೇಶಕಿ ಪ್ರಭಾವತಿ, ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪುಪ್ಪಾವತಿ, ದಾವಣಗೆರೆಯ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು ಇದ್ದರು.

Leave a Reply

Your email address will not be published. Required fields are marked *

You missed