ನ್ಯಾಮತಿ:ಜಿಲ್ಲೆಯಲ್ಲಿ ಮಹಿಳೆಚಿiÀುರು ಕೈಗೊಂಡಿರುವ ಸ್ವ-ಉದ್ಯೋಗ ಯೋಜನೆ, ಸಂಜೀವಿನಿ ಸಂಘಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುವ ಮೂಲಕ ಆರ್ಥಿಕಾಭಿವೃದ್ಧಿ ಹೊಂದಲು ಕ್ರಮಕೈಗೊಳ್ಳಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು.
ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಗುರುವಾರ ಗ್ರಾಮ್ಭಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಾವಣಗೆರೆ ಜಿಲ್ಲಾ ಪಂಚಾಯತ್, ಹೊನ್ನಾಳಿ-ನ್ಯಾಮತಿ ತಾಲ್ಲೂಕು ಪಂಚಾಯತ್ ಆಯೋಜಿಸಿದ್ದ ನರೇಗ ವೈಯಕ್ತಿಕ ಫಲಾನುಭವಿಗಳ ಕಾಮಗಾರಿಗಳ ಆದೇಶ ವಿತರಣೆ, ಸಂಜೀವಿನಿ ಮಾಸಿಕ ಸಂತೆ, ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ, 2024-25ನೇ ಸಾಲಿನ ಗ್ರಾಮ ಪಂಚಾಯತಿಯ ವಿಶೇಷ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಎರಡು ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳು ಕರ ವಸೂಲಿ, ನರೇಗ, ಕಾರ್ಯಕ್ಷಮತೆ ಯಲ್ಲಿ ಉತ್ತಮ ಸಾಧನೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಎಸ್‍ಎಸ್ ಸೇವಾ ಟ್ರಸ್ಟ್ ವತಿಯಿಂದ ಉಚಿತವಾಗಿ ಡಯಾಲಿಸಿಸ್, ಉಚಿತ ಹೆರಿಗೆ ಸೌಲಭ್ಯ,ಕಣ್ಣಿನ ಪೊರೆ ಚಿಕಿತ್ಸೆಗಳನ್ನು ಒದಗಿಸುತ್ತಿದ್ದು. ವಾಯು ವಿಹಾರ, ಯೋಗಸಾನ ಅಭ್ಯಾಸ ಮಾಡುವ ಮೂಲಕ ಮಹಿಳೆಚಿiÀುರು ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳಿ ಎಂದರು.
ಹೊನ್ನಾಳಿ-ನ್ಯಾಮತಿ ತಾಲ್ಲೂಕಿನ ಅಭಿವೃದ್ದಿ ಕಾಮಗಾರಿಗಳಿಗೆ ಲP್ಫ್ಷಂತರ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಅಭಿವೃದ್ದಿ ಕಾಮಗಾರಿಗಳಿಗೆ ದೇವಸ್ಥಾನ ನಿರ್ಮಾಣಕ್ಕೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಸದರು,ಉಸ್ತುವಾರಿ ಸಚಿವರು, ಶಾಸಕರು ನಿಗಾ ವಹಿಸಿದ್ದಾರೆ. ಅದರಂತೆ ಹಳೆಯ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ದಾವಣಗೆರೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿರುವುದು ಶ್ಲಾಘನೀಚಿiÀು ಎಂದರು.
ಶಾಸಕ ಡಿ.ಜಿ.ಶಾಂತನಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪ್ರಭಾರ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ಅವಳಿ ತಾಲ್ಲೂಕಿನಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳು ಮಾಡಿರುವ ಸಾಧನೆ ಗುರುತಿಸಿ ಬಹುಮಾನ ಪ್ರಶಸ್ತಿಪತ್ರವನ್ನು ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಶಿವರಾಮನಾಯ್ಕ, ಡಿ.ಜಿ.ವಿಶ್ವನಾಥ, ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್.ಪ್ರಕಾಶ, ನ್ಯಾಮತಿ ತಾಲ್ಲೂಕು ಇಒ ಎಚ್.ವಿ.ರಾಘವೇಂದ್ರ, ಪಿಡಿಒ ಜಯಪ್ಪ ಉಪಸ್ಥಿತರಿದ್ದರು.
