ನ್ಯಾಮತಿ ತಾಲ್ಲೂಕು ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿ ಗುರುವಾರ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಅಡ್ಡಪಲ್ಲಕ್ಕಿ ಉತ್ಸವ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿತು.
ಗ್ರಾಮದ ಭದ್ರಕಾಳಿ ಸಮೇತ ವೀರಭದ್ರೇಶ್ವರ, ಉಡುಚಲಮ್ಮ, ಮಾತಂಗ್ಯಮ್ಮ, ಗುಳ್ಳಮ್ಮ ದೇವರುಗಳ ದೇವಸ್ಥಾ£ ಮತ್ತು ಮಹಾದ್ವಾರ ಉದ್ಘಾಟನೆ, ಪ್ರಾಣಪ್ರತಿಷ್ಠಾಪನೆ ಮತ್ತು ಚೌಡಮ್ಮದೇವಿ ದೇವಸ್ಥಾನದ ಕಳಸಾರೋಹಣ ಮತ್ತು ಧರ್ಮಸಭೆ ಕಾರ್ಯಕ್ರಮಗಳಿಗೆ ಆಗಮಿಸಿದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು.


ಹಿರೇಕಲ್ಮಠ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ರಾಂಪುರ ಹಾಲಸ್ವಾಮಿ ವ್ಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಕೋಹಳ್ಳಿವ್ಮಠದ ಎನ್.ಕೆ.ವಿಶ್ವರಾದ್ಯ ಗುರುಗಳ ನೇತೃತ್ವದಲ್ಲಿ ಮಂಗಳ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು.
ಸ್ಥಳೀಚಿiÀು ಮತ್ತು ಸುತ್ತಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಡ್ಡಪಲ್ಲಕ್ಕಿ ಉತ್ಸವವನ್ನು ವೀಕ್ಷಣೆ ಮಾಡಿದರು.

Leave a Reply

Your email address will not be published. Required fields are marked *