ನ್ಯಾಮತಿ:
ಜಮ್ಮು ಕಾಶ್ಮಿರದ ಆನಂತನಾಣ್ ಜಿಲ್ಲೆಯ ಪ್ರವಾಸಿತಾಣ ಪಹಲ್ಗಾಮ್ ಬೈಸರನ್ ಕಣಿವೆಯಲ್ಲಿ ಪ್ರವಾಸಿU್ಪರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪ್ರತಿಯೊಬ್ಬರು ಖಂಡಿಸಿ ದಾಳಿಕೋರರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.
ಪಟ್ಟಣದಲ್ಲಿ ಯುವಾಬ್ರಿಗೇಡ್ ವತಿಯಿಂದ ಜಮ್ಮು ಕಾಶ್ಮಿರದ ಆನಂತನಾಣ್ ಜಿಲ್ಲೆಯ ಪ್ರವಾಸಿತಾಣ ಪಹಲ್ಗಾಮ್ ಬೈಸರನ್ ಕಣಿವೆಯಲ್ಲಿ ಪ್ರವಾಸಿU್ಪರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ‘ಉಗ್ರರ ವಿರುದ್ಧ ಕನ್ನಡಿಗ’ ಎಂಬ ಹೆಸರಿನಲ್ಲಿ ಆಯೋಜಿಸಿದ್ದ ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವೀರಭದ್ರೇಶ್ವರ ದೇವಸ್ಥಾನದಿಂದ ಹೆಚ್ಚಿನ ಸಂಖ್ಯೆಯ ಯುವಕರು ಕೈಯಲ್ಲಿ ಪಚಿಜು ಹಿಡಿದಿ ಪಾಕಿಸ್ತಾನ ವಿರುದ್ದ ಘೋಷಣೆಗಳನ್ನು ಕೂಗುತ್ತ ಬನಶಂಕರಿ ದೇವಸ್ಥಾನವರೆಗೆ ಮೆರವಣಿಗೆ ನಡೆಸಿ ಮುಖಂಡರು ಮಾತನಾಡಿದರು.
ಯುವಾಬ್ರಿಗೇಡ್‍ನ ಪದಾಧಿಕಾರಿಗಳು, ಬಿಜೆಪಿ ಮುಖಂಡರು, ಹೆಚ್ಚಿನ ಸಂಖ್ಯೆಯ ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
