ಶಿವಮೊಗ್ಗ, ಜುಲೈ 07: : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಿದ್ದು, ಆಸಕ್ತ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಅರ್ಜಿಸಲ್ಲಿಸಲು ಕೊನೆಯ ಜುಲೈ 25.
 ಆಸಕ್ತ ಅಭ್ಯರ್ಥಿಗಳು ಅಕಾಡೆಮಿಯ ವೆಬ್‌ಸೈಟ್  https://sahithyaacademy.karnataka.gov.in   ಯಿಂದ ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *