ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆ ಜಿಲ್ಲೆಯ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ತಿಳಿಸಿದ್ದಾರೆ.
2024 -25ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 70ಕ್ಕೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಪತ್ರಕರ್ತರ ಮಕ್ಕಳು ದಾವಣಗೆರೆ ಜಿಲ್ಲಾ ಮಟ್ಟದ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ.
ಎಸ್ ಎಸ್ಎಲ್ ಸಿ ಯಲ್ಲಿ
ಆಯ್ಕೆಯಾದ ಮಕ್ಕಳನ್ನು ವಿದ್ಯಾಸಿರಿ' ಪ್ರಶಸ್ತಿಯೊಂದಿಗೆ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 70ಕ್ಕೂ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳನ್ನುವಿದ್ಯಾರತ್ನ’ ಪ್ರಶಸ್ತಿಯೊಂದಿಗೆ ಸನ್ಮಾನಿಸಿ, ಸ್ಮರಣಿಕೆ, ಫಲ-ಪುಷ್ಪದೊಂದಿಗೆ ಗೌರವಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 120ಕ್ಕೂ ಹೆಚ್ಚು ಅಂಕಗಳನ್ನು ಪಡೆದ ಪತ್ರಕರ್ತರ ಮಕ್ಕಳನ್ನು ವಿಶೇಷವಾಗಿ ಪುರಸ್ಕರಿಸಲಾಗುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಎ. ಫಕ್ರುದ್ದೀನ್ ವಿವರಿಸಿದ್ದಾರೆ.
ಅರ್ಹ ಪತ್ರಕರ್ತರ ಮಕ್ಕಳು, ಸ್ವ-ವಿವರ, ಭಾವಚಿತ್ರ, ಅಂಕಪಟ್ಟಿ ಜೆರಾಕ್ಸ್‌ ಪ್ರತಿಯೊಂದಿಗೆ ಜುಲೈ 20 ರೊಳಗಾಗಿ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳನ್ನು ಇದೆ ತಿಂಗಳು ನಡೆಯುವ ಸಮಾರಂಭದಲ್ಲಿ ಪುರಸ್ಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ: ಎ. ಫಕೃದ್ದೀನ್, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಎನ್ ವಿ ಬದರಿನಾಥ 94482-77772 86180-02539.86180 63304

Leave a Reply

Your email address will not be published. Required fields are marked *