ದಾವಣಗೆರೆ ಜುಲೈ.14 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ತಲುಪಿದ ಹಿನ್ನೆಲೆಯಲ್ಲಿ ಸೋಮವಾರ(ಜುಲೈ 14) ರಂದು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಶಾಸಕರಾದ ಬಸವಂತಪ್ಪ ನವರ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಈ ವೇಳೆ ಮಾತನಾಡಿದ ಅವರು ಶಕ್ತಿ ಯೋಜನೆಯಿಂದ ಸುಮಾರು 40 ರಷ್ಟು ಪ್ರಯಾಣಿಕರ ಪ್ರಮಾಣ ಹೆಚ್ಚಿದ್ದು ಇದು ಪ್ರಯಾಣ ಅμÉ್ಟೀ ಅಲ್ಲ ಉದ್ಯೋಗಕ್ಕೆ ದಾರಿ ಮಾಡಿ ಕೊಟ್ಟಿದೆ. ಮಹಿಳೆಯರು ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವಾಗಿದೆ. ಶಕ್ತಿ ಯೋಜನೆಯ ಸಹಾಯದಿಂದ ಮಹಿಳೆಯರು ಯಾರನ್ನೂ ಅವಲಂಬಿಸದೆ ಮುಕ್ತವಾಗಿ ಪ್ರಯಾಣಿಸಿ, ಈ ಯೋಜನೆಯು ಕರ್ನಾಟಕ ರಾಜ್ಯದ ಎಲ್ಲಾ ಆರ್ಥಿಕವಾಗಿ ಹಿಂದುಳಿದ ಮಹಿಳಾ ನಾಗರಿಕರ ಸಾಮಾಜಿಕ ಸ್ಥಾನಮಾನ ಮತ್ತು ಜೀವನ ಮಟ್ಟವನ್ನು ಸುಧಾರಿಸಿದೆ. ಕರ್ನಾಟಕ ರಾಜ್ಯದ ಎಲ್ಲಾ ಮಹಿಳಾ ನಾಗರಿಕರು ಯಾವುದೇ ವಯಸ್ಸು ಅಥವಾ ಆದಾಯದ ನಿಬರ್ಂಧವಿಲ್ಲದೆ ಶಕ್ತಿ ಯೋಜನೆಯಡಿಯಲ್ಲಿ ಪ್ರಯಾಣಿಸಬಹುದು ಎಂದರು.
ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷ ಬಸವರಾಜ.ಟಿ.ಶಾಮನೂರು ಮಾತನಾಡಿ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳೆಯರು ಇದರಿಂದ ಉಳಿತಾಯವದಂತಹ ಹಣವನ್ನು ಶಾಲಾ ಕಟ್ಟಡಗಳಿಗೆ, ಬೋರ್ವೆಲ್ ಕೊರೆಯಿಸಲು ಹಣದ ಸಹಾಯವನ್ನು ಮಾಡಿರುತ್ತಾರೆ. ಬಡವರಿಗೆ, ಸಾಮಾನ್ಯ ಮತ್ತು ಮಧ್ಯಮ ವರ್ಗದ ಕುಟುಂಬದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಈ ಓಡಾಟದ ವೆಚ್ಚವನ್ನು ಮನೆ ಖರ್ಚಿಗೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆಗೆ ಅನುಕೂಲವಾಗಿದೆ. ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯು ನಾಡಿನ ನಾರಿಯರ ಸಬಲೀಕರಣಕ್ಕೆ ಬೆಂಬಲ ನೀಡಿದೆ. ರಾಜ್ಯದ್ಯಂತ ಪ್ರತಿದಿನ ಸುಮಾರು 50-60 ಲಕ್ಷ ಮಹಿಳೆಯರಿಗೆ ಈ ಯೋಜನೆಯ ಲಾಭ ದೊರೆಯುತ್ತಿದೆ ಎಂದರು.
ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣಕುಮಾರ್ ಮಾತನಾಡಿ, ಶಕ್ತಿಯೋಜನೆಯು ಅತ್ಯಂತ ಯಶಸ್ವಿಯಾಗಿದ್ದು 2025 ರ ಜುಲೈ 11 ರವರೆಗೆ ವಯಸ್ಕರು, ಮಕ್ಕಳು ಸೇರಿದಂತೆ 9,55,31,863 ಮಹಿಳಾ ಪ್ರಯಾಣಿಕರು ಯೋಜನೆಯ ಲಾಭ ಪಡೆದಿದ್ದು ಇದರ ವೆಚ್ಚ ರೂ. 2,77,21,78,538 ಕೋಟಿ ಮೊತ್ತವಾಗಿದೆ ಎಂದರು.
ಕೆಎಸ್ಆರ್ಟಿಸಿ ಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಬೀರ್, ಇಂದಿರಾ, ಲಕ್ಷ್ಮೀಬಾಯಿ, ಮುನೀರ್ ಇನ್ನಿತರಿಗೆ ಸನ್ಮಾನಿಸಲಾಯಿತು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಮುಖಂಡರಾದ ಶಿವಕುಮಾರ್, ಕೆಎಸ್ಆರ್ಟಿಸಿ ಸಿಬ್ಬಂದಿಗಳು ಹಾಜರಿದ್ದರು.
