ಆರ್.ಟಿ.ಐ ದ್ವಿತೀಯ ಮೇಲ್ಮನವಿ 559 ಪ್ರಕರಣಗಳು,ಮಾಹಿತಿ ಹಕ್ಕು ಆಯೋಗದಿಂದ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸಲು ಕ್ರಮ; ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ, ರಾಜಶೇಖರ್.
ದಾವಣಗೆರೆ ಜುಲೈ.18: ಮಾಹಿತಿ ಹಕ್ಕು ಕಾಯಿದೆಯಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಳ, ಒಣೆಗಾರಿಕೆ, ಭ್ರಷ್ಟಾಚಾರ ತಡೆ ಸೇರಿದಂತೆ ಆಡಳಿತದಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಲು ಬಹಳ ಉಪಯೋಗವಾಗಿದೆ. ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಲು ಮಾಹಿತಿ ಹಕ್ಕು ಆಯೋಗ ಮುಂದಾಗಿದ್ದು…
