ನ್ಯಾಮತಿ: ತಾಲೂಕು ಮಾದಾಪುರ ಗ್ರಾಮದಲ್ಲಿ 2024 -25 ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣದ ಮುಂದುವರೆದ ಕಾಮಗಾರಿ ಅಂದಾಜಿನ ಮೊತ್ತ 5 ಲಕ್ಷ‌ ರೂ ವೆಚ್ಚದ ಗುದ್ದಲಿ ಪೂಜೆಯನ್ನು ಸಂಸದ ಡಾ, ಪ್ರಭಾ ಮಲ್ಲಿಕಾರ್ಜುನ್ ಮತ್ತು ಶಾಸಕ ಡಿಜಿ ಶಾಂತನಗೌಡ್ರು ಜೊತೆಗೂಡಿ ನೆರವೇರಿಸಿದರು.
ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಬಸಮ್ಮ, ನಿರ್ದೇಶಕರುಗಳು, ಕಾರ್ಯದರ್ಶಿ ಲೋಕಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *