ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಅವರು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸುವರು.
ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಡಿ.ಎಸ್ ಅರುಣ್, ಚಿದಾನಂದ. ಎಂ.ಗೌಡ, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಆಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿಯ ಅಧ್ಯಕ್ಷರಾದ ಎನ್.ಜಯದೇವನಾಯ್ಕ, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‍ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಆಯುಕ್ತೆ ರೇಣುಕಾ ಉಪಸ್ಥಿತರಿರುವರು.
ಅಂದು ಸಂಜೆ 5 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

Leave a Reply

Your email address will not be published. Required fields are marked *