ದಾವಣಗೆರೆ. ಡಿಸೆಂಬರ್.16: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀಚೌದರಿ ಅವರು ಡಿಸೆಂಬರ್-2025ರ ಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿಸೆಂಬರ್ 17 ರಂದು ದಾವಣಗೆರೆ ಆಗಮಿಸಿ ಬೆಳಿಗ್ಗೆ 11.15ಕ್ಕೆ ಹೊನ್ನಾಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡುವರು. ಮಧ್ಯಾಹ್ನ 12 ಗಂಟೆಗೆ ಹೊನ್ನಾಳಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ(ರಿ) ಅವರು ಹಮ್ಮಿಕೊಂಡಿರುವ ದಾಸ ಶ್ರೇಷ್ಠ ಶ್ರೀಭಕ್ತ ಕನಕದಾಸರ 538ನೇ ಜಯಂತೋತ್ಸವದಲ್ಲಿ ಕನಕ ಉತ್ಸವಕ್ಕೆ ಚಾಲನೆ ನೀಡುವರು. ಸಂಜೆ 4.18ಕ್ಕೆ ದಾವಣಗೆರೆಯಿಂದ ತುಮಕೂರಿಗೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *